vltvkannada.com ಉಳ್ಳಾಲ:ಸಮುದಾಯ ಭವನಗಳಿಗೆ ಅಂಬೇಡ್ಕರ್ ಅವರ ಹೆಸರಿಡುವುದು ಮಾತ್ರ ಅಲ್ಲ,ಅವರ ತತ್ವ,ಆದರ್ಶಗಳನ್ನ ಯುವ ಪೀಳಿಗೆಗೂ ವರ್ಗಾಯಿಸುವ ಕಾರ್ಯ ಇಲ್ಲಿ ನಡೆಯಬೇಕು.ಅವರ ಅರ್ಧದಷ್ಟು ವ್ಯಕ್ತಿತ್ವವನ್ನಾದರೂ ನಾವು ಮೈಗೂಡಿಸಿ ಕೊಳ್ಳಬೇಕೆಂದು ಕರ್ನಾಟಕ ವಿದಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ,ದ.ಕ ಜಿಲ್ಲಾ ಪಂಚಾಯತ್ ,ಉಳ್ಳಾಲ ತಾಲೂಕು ಪಂಚಾಯತ್ ಹಾಗೂ ಮುನ್ನೂರು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕುತ್ತಾರು ಸಮೀಪದ ದೇವಿಪುರದಲ್ಲಿ ನಿರ್ಮಾಣಗೊಂಡಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ “ಭೀಮ ಸೌಧ” ವನ್ನು ಶನಿವಾರದಂದು ಅವರು ಉದ್ಘಾಟಿಸಿ ಮಾತನಾಡಿದರು.ನೂತನ ಸಮುದಾಯ ಭವನದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯುವಂತಾಗಬೇಕು.ಆಗ ಈ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ.ಮುನ್ನೂರು ಪ್ರದೇಶದ ಅಭಿವೃದ್ಧಿಗೆಂದೇ ಒಂದೂವರೆ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ ಎಂದರು.

ಹಿರಿಯ ದೈವ ನರ್ತಕರಾದ ಮಾಯಿಲ,ರಾಣಿಪುರ ಚರ್ಚ್ ನ ಧರ್ಮಗುರುಗಳಾದ ರೆ.ಫಾ.ಜಯಪ್ರಕಾಶ್ ಡಿಸೋಜ,ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿ.ಎಸ್.ಗಟ್ಟಿ,ಮೂಡ ಅಧ್ಯಕ್ಷರಾದ ಸದಾಶಿವ ಉಳ್ಳಾಲ್,ಮುನ್ನೂರು ಗ್ರಾ.ಪಂ.ಅಧ್ಯಕ್ಷರಾದ ರೆಹನಾ ಬಾನು,ಉಪಾಧ್ಯಕ್ಷರಾದ ಮಹಾಬಲ ಟಿ.ದೆಪ್ಪೆಲಿಮಾರ್ ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕಾರ್ಬಾರಿ,ಜಿ.ಪಂ.ಯೋಜನಾ ನಿರ್ದೇಶಕರಾದ ಜಯರಾಮ್, ಉಳ್ಳಾಲ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಗುರುದತ್,ಸ್ಥಳೀಯ ಮುಖಂಡರಾದ ಮಾದಪ್ಪ,ಗ್ರಾ.ಪಂ ಸದಸ್ಯರಾದ ಬಾಬು ಶೆಟ್ಟಿ,ಲೀಲಾವತಿ,ಸುರೇಖ,ತಾ.ಪಂ ಮಾಜಿ ಸದಸ್ಯೆ ವಿಲ್ಮಾ ಡಿಸೋಜ,ಮಾನವ ಬಂಧುತ್ವ ವೇದಿಕೆಯ ತಾಲೂಕು ಸಂಚಾಲಕ ದಿನೇಶ್ ಮೂಳೂರು,ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಶೆಟ್ಟಿ ಬೋಳಿಯಾರ್,ಜಿಲ್ಲಾ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ತಿಮ್ಮಕ್ಕ ,ಮಾಜಿ ಜಿ.ಪಂ ಸದಸ್ಯರಾದ ಧನಲಕ್ಷ್ಮೀ ಗಟ್ಟಿ ,ಮುನ್ನೂರು ಗ್ರಾ.ಪಂ ಮಾಜಿ ಅಧ್ಯಕ್ಷ ವಿಲ್ಫ್ರೆಡ್ ಡಿಸೋಜ,ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ರಫೀಕ್ ಅಂಬ್ಲಮೊಗರು ಮೊದಲಾದವರು ಉಪಸ್ಥಿತರಿದ್ದರು.
ಮುನ್ನೂರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶ್ರೀಕಾಂತ್ ಸಿಂಪಿಗೇರ ಸ್ವಾಗತಿಸಿದರು.ಮಾಜಿ ಉಪಾಧ್ಯಕ್ಷರಾದ ಮುಸ್ತಾಫ ಪ್ರಸ್ತಾವಿಕವಾಗಿ ಮಾತನಾಡಿದರು.