ಕ್ರೀಡೆಯಿಂದ ಒತ್ತಡ ನಿವಾರಣೆ ಸಾಧ್ಯ: ಸುಧೀ‌ರ್ ರೆಡ್ಡಿ

Date:

ಮಂಗಳೂರು, ಜ.25: ಪೊಲೀಸರು ಹಾಗೂ ಪತ್ರಕರ್ತರು ಸದಾ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಇದೆ. ಕ್ರೀಡಾ ಚಟುವಟಿಕೆಗಳಿಗೆ ಸಮಯ ಮೀಸಲಿಡುವುದರಿಂದ ಒತ್ತಡ ನಿವಾರಣೆ ಸಾಧ್ಯ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಕದ್ರಿಯ ಕೆ.ಪಿ.ಟಿ. ಮೈದಾನದಲ್ಲಿ ರವಿವಾರ ನಡೆದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪ ರಾಜ್.ಬಿ.ಎನ್. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಕೆ.ಪಿ. ಟಿ.ಯ ಪ್ರಾಂಶುಪಾಲ ಹರೀಶ್ ಶೆಟ್ಟಿ ಶುಭ ಹಾರೈಸಿದರು. ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್.ಕೆ.ಪೂಜಾರಿ, ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ ವಂದಿಸಿದರು. ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.

ಕ್ರೀಡಾಕೂಟದ ಅಂಗವಾಗಿ ವಿವಿಧ ಮನರಂಜನಾ ಹಾಗೂ ದೈಹಿಕ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಪ್ರಮುಖ ಆಕರ್ಷಣೆಯಾಗಿದ್ದ ಪುರುಷರ ಕ್ರಿಕೆಟ್ ಪಂದ್ಯಾಟದಲ್ಲಿ 10 ತಂಡಗಳು ಪಾಲ್ಗೊಂಡಿದ್ದು, ವಾರ್ತಾಭಾರತಿ ಬಿ ತಂಡ ಪ್ರಥಮ ಸ್ಥಾನ ಪಡೆಯಿತು. ರನ್ನರ್ ಅಪ್ ಸ್ಥಾನವನ್ನು ವಾರ್ತಾಭಾರತಿ ಎ ತಂಡ ಪಡೆಯಿತು. ಇದೇ ಮೊದಲ ಬಾರಿಗೆ ನಡೆದ ಮಹಿಳಾ ಕ್ರಿಕೆಟ್ ಪಂದ್ಯಾಟದಲ್ಲಿ ಹೊಸದಿಗಂತ ತಂಡ ಪ್ರಥಮ ಸ್ಥಾನ ಹಾಗೂ ಸನ್ಮಾರ್ಗ ತಂಡ ರನ್ನರ್ ಅಪ್ ಸ್ಥಾನ ಪಡೆಯಿತು. ಸಮಾರೋಪ ಸಮಾರಂಭದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಅಧ್ಯಕ್ಷತೆಯಲ್ಲಿ ಪ್ರೆಸ್‌ಕ್ಲಬ್‌ ಅಧ್ಯಕ್ಷ ಹರೀಶ್ ರೈ, ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ, ಕೆಪಿಟಿ ದೈಹಿಕ ಶಿಕ್ಷಕ ಸೂರಜ್ ಉಪಸ್ಥಿತರಿದ್ದು, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...