ದೇಶ ಹಾಗೂ ದೇಶದ ಬಡಜನತೆ, ಶೋಷಿತರು ಉಳಿಯಬೇಕಾದರೆ, ಸಂವಿಧಾನವನ್ನು ಉಳಿಸಬೇಕು: ಅಬ್ದುಲ್ ಮಜೀದ್ ಮೈಸೂರು

Date:

ಬೆಳ್ತಂಗಡಿ: ದೇಶ ಹಾಗೂ ದೇಶದ ಬಡಜನತೆ, ಶೋಷಿತರು ಉಳಿಯಬೇಕಾದರೆ, ಸಂವಿಧಾನವನ್ನು ಉಳಿಸಬೇಕು ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಹೇಳಿದರು. 77 ನೇ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ “ಸಂವಿಧಾನ ಮೌಲ್ಯಗಳ ರಕ್ಷಣೆ – ಗಣರಾಜ್ಯ ಸಂಭ್ರಮ” ಎಂಬ ಘೋಷ ವಾಕ್ಯದೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮವು ಅಕ್ಟ‌ರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ನಡೆಯಿತು.

ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ರವರು ಧ್ವಜಾರೋಹಣ ನೆರೆವೇರಿಸಿ ಮಾತಾಡಿ, ಗಣರಾಜ್ಯೋತ್ಸವ ದಿನಾಚರಣೆಯ ಭಾಗವಾಗಿ ದೇಶ ಹಾಗೂ ದೇಶದ ಬಡಜನತೆ, ಶೋಷಿತರು ಉಳಿಯಬೇಕಾದರೆ, ಸಂವಿಧಾನವನ್ನು ಉಳಿಸಬೇಕು. ಸಂವಿಧಾನ ಪೂರ್ವದಲ್ಲಿ ಇಲ್ಲದ ಹಕ್ಕುಗಳು ಸಂವಿಧಾನ ಜಾರಿಯ ನಂತರ ಹಲವಾರು ಹಕ್ಕುಗಳು ಸಿಕ್ಕಿದೆ. ಸಂವಿಧಾನವನ್ನು ಉಳಿಸಲು ನಾವೆಲ್ಲರೂ ತಯಾರಾಗಬೇಕು. ಇತ್ತೀಚಿಗೆ ಸಂವಿಧಾನ ವಿರೋಧಿ ಕರಾಳ ಕಾನೂನುಗಳು, NIA ಮತ್ತು ED ಸಂಸ್ಥೆಗಳ ದುರುಪಯೋಗ, ಸರ್ಕಾರವನ್ನು ಪ್ರಶ್ನಿಸುವವರ ಮೇಲೆ UAPA ಹೇರಿ ಅಕ್ರಮ ಬಂಧನ, ಆಳುವವರ ಷಡ್ಯಂತ್ರಗಳು ನಮ್ಮ ಸಂವಿಧಾನದ ಆತ್ಮವನ್ನೇ ದುರ್ಬಲಗೊಳಿಸುತ್ತಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ನೂತನ ರಾಷ್ಟ್ರೀಯ ಕಾರ್ಯದರ್ಶಿ ಅಲ್ಲೋನ್ಸ್ ಫ್ರಾಂಕೋ ಹಾಗೂ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಕಾರ್ಯಕ್ರಮನ್ನು ಉದ್ದೇಶಿಸಿ ಮಾತನಾಡಿದರು. 2026-28ರ ಅವಧಿಗೆ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೂತನವಾಗಿ ಆಯ್ಕೆಯಾದ ಅನ್ಫೋನ್ಸ್ ಫ್ರಾಂಕೋ ರವರಿಗೆ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು. ಕಾರ್ಯಕ್ರಮವನ್ನು ಅಲ್ಪಾಕ್ ಪುಂಜಾಲಕಟ್ಟೆ ನಿರೂಪಿಸಿ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕನ್ನಡ ಮಾಧ್ಯಮ ಸರಕಾರಿ ಶಾಲೆಯ ಶಹಝಾದ್ ಗುರುವಾಯನಕೆರೆ ಎಸ್ಸೆಸ್ಸೆಲ್ಸಿಯಲ್ಲಿ ತಾಲೂಕಿಗೆ ಪ್ರಥಮ

ಬೆಳ್ತಂಗಡಿ; ನಮ್ಮೂರ ಪ್ರೌಢ ಶಾಲೆ ಗುರುವಾಯನಕೆರೆ ಇಲ್ಲಿನ ವಿದ್ಯಾರ್ಥಿ ಮಹಮ್ಮದ್ ಶಹಝಾದ್...

ರಾಘವ್ ಚಡ್ಡಾ ಬಿಜೆಪಿ ಸೇರ್ಪಡೆ: ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಡಾ.ಅಬ್ದುಲ್‌ ಶಕೀಲ್

ಮಂಗಳೂರು: ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ಹಾಗೂ ರಾಜ್ಯಸಭಾ ಸದಸ್ಯ...

ಮಂಗಳೂರು ಪೊಲೀಸ್ ಕಮಿಷನರ್ ವರ್ಗಾವಣೆ ವಿಚಾರ ಕೈಬಿಡಲು ಮನವಿ: ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ

ಮಂಗಳೂರು: ಇಲಾಖೆಯೊಳಗಿನ ಸಣ್ಣಪುಟ್ಟ ಗೊಂದಲಗಳ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷ್ನರ್ ವರ್ಗಾವಣೆ...

ದ.ಕ. ಜಿಲ್ಲಾ‌ ಮಟ್ಟದ ಆನ್ ಲೈನ್ ಖಿರಾಅತ್ ಸ್ಪರ್ಧೆ

ಪ್ರಥಮ ಮಿಸ್ಹಬ್ ಬಿನ್ ಅಬೂಬಕರ್ ಸಿದ್ದೀಕ್, ದ್ವಿತೀಯ ಜಿ.ಎಂ.ಮುಹಮ್ಮದ್ ಸಲ್ಮಾನ್, ತೃತೀಯ...