ಹೆಲಿಕಾಪ್ಟರ್ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ದುರ್ಮರಣ, ಅಭಯಚಂದ್ರ ಜೈನ್ ಸಂತಾಪ

Date:

ಮೂಡುಬಿದಿರೆ: ಹೆಲಿಕಾಪ್ಟರ್ ದುರಂತದಲ್ಲಿ ಬುಧವಾರ ನಿಧನ ಹೊಂದಿದ ಮಹಾರಾಷ್ಟ್ರದ ಪುಣೆ ಸಮೀಪದ ಬಾರಾಮತಿ ಕ್ಷೇತ್ರದ ಸಜ್ಜನ ರಾಜಕಾರಣಿಯಾಗಿದ್ದ ಅಜಿತ್ ಪವಾರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಮೇಲೆ ಅಪಾರ ಅಭಿಮಾನವಿತ್ತು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.

ಅಭಯಚಂದ್ರ ಜೈನ್

ಬಾರಾಮತಿ ಕ್ಷೇತ್ರವು ಮಹಾರಾಷ್ಟ್ರ ರಾಜಕಾರಣದಲ್ಲಿ ಮಹತ್ವ ಪಡೆದ ಕ್ಷೇತ್ರವಾಗಿದ್ದು, ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು ಉಪಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದರು ಎಂದು ಜೈನ್ ಸ್ಮರಿಸಿದರು.


2004ರಲ್ಲಿ ತಾವು ಕರ್ನಾಟಕ ಸರ್ಕಾರದ ಮುಖ್ಯ ಸಚೇತರಾಗಿದ್ದ ವೇಳೆ ಬಾಂಬೆಯಲ್ಲಿ ನಡೆದ ಸಮ್ಮೇಳನಗಳಲ್ಲಿ ಅವರನ್ನು ಭೇಟಿಯಾಗುವ ಅವಕಾಶ ಲಭಿಸಿತ್ತು ಎಂದು ನೆನಪಿಸಿಕೊಂಡ ಅವರು, ಪವಾರ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿ ಮೃತ ಆತ್ಮಕ್ಕೆ ಶಾಂತಿ ಕೋರಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...