ಅಖಿಲ ಭಾರತ ಮಹಾ ಮುಷ್ಕರ: ಮೂಡಬಿದಿರೆಯಿಂದ ರೈತ-ಕಾರ್ಮಿಕರ ಪಾದಯಾತ್ರೆ

Date:

ಮೂಡಬಿದಿರೆ: ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾಗಿ ರೂಪಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧ ರೈತ-ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಮಂಗಳವಾರ ಮೂಡುಬಿದಿರೆಯಿಂದ ಪಾದಯಾತ್ರೆ ನಡೆಸಲಾಯಿತು.

ಮೂಡುಬಿದಿರೆ ಬಸ್ ನಿಲ್ದಾಣದಿಂದ ಆರಂಭವಾದ ಪಾದಯಾತ್ರೆಯಲ್ಲಿ ರೈತರು, ಕಾರ್ಮಿಕರು ಹಾಗೂ ಸಂಘಟನೆಗಳ ಮುಖಂಡರು ಭಾಗವಹಿಸಿ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಸಿಐಟಿಯು ಉಪಾಧ್ಯಕ್ಷ ವಸಂತ ಆಚಾರಿ, ವಿದೇಶಿ ಮೂಲದ ಉದ್ಯಮಗಳಿಗೆ ಭಾರತದ ನೆಲವನ್ನು ಒಪ್ಪಿಸುವ ನೀತಿಯನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿದರು.

ವಿಮಾ ಕ್ಷೇತ್ರದಲ್ಲಿ ದೇಶೀಯ ಕಂಪನಿಗಳಿಗೆ ಹೆಚ್ಚಿನ ಅವಕಾಶ ನೀಡಬೇಕು. ಜೊತೆಗೆ ದೇಶದ ಜನಸಾಮಾನ್ಯರು ಹಾಗೂ ದುಡಿಯುವ ವರ್ಗಕ್ಕೆ ಉದ್ಯೋಗ ಮತ್ತು ಭದ್ರತೆ ಒದಗಿಸುವಂತ ನೀತಿಗಳನ್ನು ರೂಪಿಸಬೇಕೆಂದು ಸರ್ಕಾರಗಳನ್ನು ಒತ್ತಾಯಿಸಿದರು.ಪಾದಯಾತ್ರೆಯಲ್ಲಿ ಯಾದವ ಶೆಟ್ಟಿ, ರಾಧಾ, ಗಿರಿಜಾ, ನೋಣಯ್ಯ ಗೌಡ, ರಮಣಿ ಸೇರಿದಂತೆ ಕಾರ್ಮಿಕರು, ಸಂಘಟನಾ ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...