ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ.ಗೆ ಪಿಎಚ್‌ಡಿ ಪದವಿ ಪ್ರದಾನ

Date:

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ದಾವಣಗೆರೆ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ. ಪವಿತ್ರ ಎ.ವಿ. ಅವರು “ಸೈಕೋಸೋಷಿಯಲ್ ಡೈಮೆನ್ಶನ್ಸ್ ಆಫ್ ಸುಸೈಡಲ್ ಬಿಹೇವಿಯರ್ ಅಮಾಂಗ್ ರೂರಲ್ ಅಡೊಲೆಸೆಂಟ್ಸ್ ವಿಥ್ ಸ್ಪೆಷಲ್ ರೆಫರೆನ್ಸ್ ಟು ಗವರ್ನ್ಮೆಂಟ್ ಪ್ರಿ-ಯುನಿವರ್ಸಿಟಿ ಕಾಲೇಜಸ್ ಇನ್ ಕರ್ನಾಟಕ” ಎಂಬ ವಿಷಯದ ಕುರಿತು ಮಹಾಪ್ರಬಂಧ ಮಂಡಿಸಿದ್ದರು.

ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಲೋಕೇಶ್ ಎಂ.ಯು. ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ, ಯಶಸ್ವಿಯಾಗಿ ಪಿಎಚ್‌ಡಿ ಪೂರ್ಣಗೊಳಿಸಿದ್ದಾರೆ. ಜ. 30ರಂದು ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಿದರು. ಪವಿತ್ರ ಎ.ವಿ. ಅವರು ಎಂಆರ್‌ಪಿಎಲ್ ಸಂಸ್ಥೆಯ ಮಾರ್ಕೆಟಿಂಗ್ ವಿಭಾಗದ ಚೀಫ್ ಮ್ಯಾನೇಜರ್ ಸ್ವಾಮಿ ಪ್ರಸಾದ್ ಅವರ ಪತ್ನಿ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...