ಮೂಡುಬಿದಿರೆ: ಭಾರತೀಯ ಸೇನೆಯ ಮೇಜರ್ ಜನರಲ್ ಬ್ರೂಸ್ ಫೆರ್ನಾಂಡಿಸ್ ದಂಪತಿ ಮೂಡುಬಿದಿರೆಯ ಸಾವಿರ ಕಂಬ ಬಸದಿಗೆ ಭೇಟಿ ನೀಡಿ, ದೇವರ ದರ್ಶನ ಪಡೆದರು.
ಶ್ರೀ ಕ್ಷೇತ್ರದ ಪರಂಪರೆ, ವಾಸ್ತುಶಿಲ್ಪ ಹಾಗೂ ಐತಿಹಾಸಿಕ ಮಹತ್ವದ ಕುರಿತು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಮಾಹಿತಿ ನೀಡಿದರು.



