ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜು ಸ್ಥಗಿತ: ಜಿಲ್ಲಾಧಿಕಾರಿ ತಕ್ಷಣ ಮಧ್ಯಪ್ರವೇಶಿಸಬೇಕು – ಎಸ್‌ಡಿಪಿಐ ಆಗ್ರಹ

Date:

ಬಂಟ್ವಾಳ: ಬಂಟ್ವಾಳ ಪುರಸಭೆಯಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಮುಖ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ಕೆಲವು ರಾಜಕೀಯ ಮುಖಂಡರ ಭ್ರಷ್ಟಾಚಾರದ ಹಿನ್ನೆಲೆ, ಟೆಂಡರ್ ಅವಧಿ ಮುಗಿದಿದ್ದರೂ ನಿಯಮವಿರುದ್ಧವಾಗಿ ಕಚೇರಿಯಲ್ಲಿ ಮುಂದುವರಿದಿದ್ದ ನೌಕರರ ಸಂಬಳಕ್ಕೆ ಕಡಿವಾಣ ಹಾಕಿ ಹೊಸ ನೌಕರರ ನೇಮಕಾತಿಗೆ ನೂತನ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಆದೇಶ ಹೊರಡಿಸಿದ್ದಾರೆ.

ಈ ಕ್ರಮದಿಂದ ಅಸಮಾಧಾನಗೊಂಡ ವಾಲ್‌ಮ್ಯಾನ್‌ಗಳು ನೀರು ಸರಬರಾಜು ನಿಲ್ಲಿಸಿರುವುದರಿಂದ ಪುರಸಭಾ ವ್ಯಾಪ್ತಿಯಾದ್ಯಂತ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ತಾಲೂಕು ಆಸ್ಪತ್ರೆಯಲ್ಲೂ ನೀರಿನ ಅಭಾವ ಉಂಟಾಗಿ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರದ ಪರಿಣಾಮವಾಗಿ ನೌಕರರು ನೀರು ಬಿಡದಿರುವ ಸಾಧ್ಯತೆ ಇದೆ ಎಂದು ಎಸ್‌ಡಿಪಿಐ ಮನಗಂಡಿದೆ. ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಸಾರ್ವಜನಿಕರಿಗೆ ಉಂಟಾಗಿರುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಎಸ್‌ಡಿಪಿಐ ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

ಸಮಸ್ಯೆಯನ್ನು ತಕ್ಷಣ ಬಗೆಹರಿಸಲಾಗದಿದ್ದರೆ ಸಾರ್ವಜನಿಕರನ್ನು ಸಂಘಟಿಸಿ ಪುರಸಭೆಗೆ ಮುತ್ತಿಗೆ ಹಾಕುವ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...