ಆಳ್ವಾಸ್ ನಲ್ಲಿ ಬರವಣಿಗೆ ಕಾರ್ಯಾಗಾರ

Date:

ಮೂಡುಬಿದಿರೆ: ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಬರವಣಿಗೆ ಕಾರ್ಯಗಾರವನ್ನು ಆಯೋಜಿಸಲಾಯಿತು.

ರಾಷ್ಟ್ರೀಯ ತರಬೇತುದಾರ, ಬರಹಗಾರ ಮತ್ತು ವೃತ್ತಿ ಮಾರ್ಗದರ್ಶಕ ವಿಕ್ರಮ ನಾಯಕ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ನಮ್ಮ ಜೀವನದಲ್ಲಿ ಕೆಲವೊಂದು ಚಟುವಟಿಕೆಗಳಿಂದ ನಾವು ಹಣ, ಜನಪ್ರಿಯತೆ ಮುಂತಾದವುಗಳನಷ್ಟೇ ನಿರೀಕ್ಷಿಸಬಾರದು. ಬರವಣಿಗೆ ಒಂದು ಸೃಜನಶೀಲ ಕಲೆ. ಬರವಣಿಗೆ ಆಪ್ತ ಸಮಾಲೋಚನೆಯಾಗಿಯೂ ಕಾರ್ಯನಿರ್ವಹಿಸುತ್ತದೆ.ಬರವಣಿಗೆಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಎಲ್ಲರೂ ವೃತ್ತಿಪರ ಬರಹಗಾರರಾಗಬೇಕೆಂದೇನಿಲ್ಲಆದರೆ ತಾವು ಆಯ್ಕೆ ಮಾಡಿಕೊಂಡ ವೃತ್ತಿಯಲ್ಲಿ ಉನ್ನತ ಸ್ಥಾನಮಾನವನ್ನು ತಲುಪಲು ಪರೋಕ್ಷವಾಗಿ ನೆರವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ವಿಭಾಗದ ಸಲಹೆಗಾರ ಡಾ ಪ್ರವೀಣ್ ರಾಜ್, ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಪಡಿಸುವ ಸಾಮರ್ಥ್ಯವಿದೆ. ಬರವಣಿಗೆ ಸವಾಲಾದರೂ ಸಾಧ್ಯವಿದೆ. ಪ್ರತಿಯೊಬ್ಬರೂ ತಮ್ಮದೇ ಆದ ಬರವಣಿಗೆ ಶೈಲಿಯನ್ನು ಬೆಳೆಸಿಕೊಳ್ಳಬೇಕು. ಒಬ್ಬ ಹೋಮಿಯೋಪತಿ ವೈದ್ಯನಾಗಿ ಗಮನಿಸುವ ಕಲೆಯನ್ನು ಬೆಳೆಸಿಕೊಳ್ಳುವ ಹಾಗೆ ಒಬ್ಬ ಬರಹಗಾರನಿಗೂ ತನ್ನ ಪರಿಸರವನ್ನು ಸೂಕ್ಷ್ಮವಾಗಿ ಗಮನಿಸುವ ಕಲೆ ಇರಬೇಕು. ಹೋಮಿಯೋಪತಿ ವೈದ್ಯ ಪದ್ಧತಿಯ ಉತ್ತಮ ವಿಚಾರಧಾರೆಗಳನ್ನು ಜನರಿಗೆ ತಲುಪಬೇಕಾದರೆ ಒಂದು ಲೇಖನಕ್ಕೆ ಆ ಸಾಮರ್ಥ್ಯವಿದೆ. ಈ ನಿಟ್ಟಿನಲ್ಲಿ ಬರವಣಿಗೆಯ ಕಲೆಯನ್ನು ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು.

ಕಾರ್ಯಾಗಾರದಲ್ಲಿ ಪತ್ರಿಕೆಗಳಿಗೆ ಸುದ್ದಿ ಬರೆಯುವುದು, ನುಡಿ ಚಿತ್ರ ಬರೆಯುವುದರ ಕುರಿತು ತರಬೇತಿ ನೀಡಲಾಯಿತು. ಕಾರ್ಯಾಗಾರದ ನಂತರ ಆಶು ಭಾಷಣ ಮತ್ತು ಪ್ರೇರಣಾತ್ಮಕ ಭಾಷಣ ಚಟುವಟಿಕೆಗಳನ್ನು ಆಯೋಜಿಸಲಾಯಿತು.ಆಡಳಿತ ಆಡಳಿತ ಅಧಿಕಾರಿ ಡಾ. ಪ್ರಜ್ಞಾ ಆಳ್ವ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ ಎಚ್ ರೋಷನ್ ಪಿಂಟೋ ಸ್ವಾಗತಿಸಿದರು. ಡಾ ಶ್ರೇಯಸ್ ಕೆ ಎಸ್ ವಂದಿಸಿದರು. ಕುಮಾರಿ ನಿತ್ಯ ಬಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...