ಕಾರ್ಮಿಕ ನೀತಿ ವಿರೋಧಿಸಿ ಮೂಡುಬಿದಿರೆಯಲ್ಲಿ ಬೃಹತ್ ವಾಹನ ಜಾಥಾ

Date:

ಮೂಡಬಿದಿರೆ: ಕೇಂದ್ರ ಸರ್ಕಾರವು ಕಾರ್ಮಿಕ ವರ್ಗವನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ. ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳುವ ಉದ್ದೇಶದಿಂದ 29 ಪ್ರಮುಖ ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ, ಕಾರ್ಪೊರೇಟ್ ಪರವಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿದೆ. ಇದು ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ತಳ್ಳುವ ಪ್ರಯತ್ನ,” ಎಂದು ಸಿಐಟಿಯು ಜಿಲ್ಲಾ ಅಧ್ಯಕ್ಷ ಬಿ.ಎಂ. ಭಟ್ ಎಂದು ಹೇಳಿದರು.

ಅವರು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ರೈತ–ಕಾರ್ಮಿಕರ ಜಂಟಿ ಸಮಿತಿಯ ಆಶ್ರಯದಲ್ಲಿ ಫೆಬ್ರವರಿ 12ರಂದು ದೇಶಾದ್ಯಂತ ಅಖಿಲ ಭಾರತ ಮಹಾ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಇದರ ಪೂರ್ವಭಾವಿಯಾಗಿ ಬುಧವಾರ ಮೂಡುಬಿದಿರೆಯಲ್ಲಿ ನಡೆದ ವಾಹನ ಜಾಥಾವನ್ನು ಉದ್ದೇಶಿಸಿ ಮಾತನಾಡಿದರು.“ಮಹಾ ಮುಷ್ಕರ ಕೇವಲ ಕಾರ್ಮಿಕರ ಹೋರಾಟವಲ್ಲ; ಇದು ಸಾಮಾನ್ಯ ಜನರ ಬದುಕಿನ ಹೋರಾಟ. ಆದ್ದರಿಂದ ಎಲ್ಲರೂ ಫೆಬ್ರವರಿ 12ರಂದು ಒಂದು ದಿನದ ಕೆಲಸವನ್ನು ಸ್ಥಗಿತಗೊಳಿಸಿ ಮುಷ್ಕರಕ್ಕೆ ಬೆಂಬಲಿಸಬೇಕು,” ಎಂದು ಅವರು ಮನವಿ ಮಾಡಿದರು.

ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಜಾಥಾದಲ್ಲಿ ನೂರಾರು ಕಾರ್ಮಿಕರು, ಸಂಘಟನೆಗಳ ಮುಖಂಡರು ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಾರ್ಮಿಕರ ಹಕ್ಕು ರಕ್ಷಣೆಗೆ ಒತ್ತಾಯಿಸಿ ಬ್ಯಾನರ್‌ಗಳು, ಫಲಕಗಳನ್ನು ಪ್ರದರ್ಶಿಸಲಾಯಿತು. ಮುಖಂಡರಾದ ಸೀತಾರಾಮ್, ಸುನಿಲ್ ಕುಮಾರ್ ಬಜಾಲ್, ಯಾದವ ಶೆಟ್ಟಿ, ವಸಂತ ಆಚಾರಿ, ರಮಣಿ, ಯೋಗೀಶ್ ಜಪ್ಪಿನಮೊಗರು, ರಾಧ, ವಸಂತಿ, ಲೋಲಾಕ್ಷಿ, ಜಯಶ್ರೀ ,ಮನೋಜ್ಅಭಿಷೇಕ್ ಮತ್ತಿತರರು ಈ ಸಂದಭ೯ದಲ್ಲಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...