ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರಕ್ಕೆ ಶಿಲಾನ್ಯಾಸ

Date:

ದೇರಳಕಟ್ಟೆ: ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರ, ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರಕ್ಕೆ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಶಿಲಾನ್ಯಾಸಗೈದರು.


ಬಳಿಕ ಆಶೀರ್ವಚನ ನೀಡಿದ ಶ್ರೀ ಗಳು ಹಿಂದೂ ಸಮಾಜದ ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಕಾಲಘಟ್ಟದಲ್ಲಿ ನಾವಿರುವಾಗ ತೌಡುಗೋಳಿಯಲ್ಲಿ ನಡೆಯುತ್ತಿರುವಂತಹ ಈ ಕ್ಷೇತ್ರದ ಜೀರ್ಣೋದ್ದಾರ ಮಹತ್ವ ಪಡೆದಿದೆ. ಪ್ರತಿಯೊಬ್ಬರೂ ಈ ಪುಣ್ಯಕಾರ್ಯದಲ್ಲಿ ಕೈ ಜೋಡಿಸಿ ಯಶಸ್ವೀಗೊಳಿಸಲು ಕರೆ ನೀಡಿದರು.


ಉದ್ಯಾವರ ಮಾಡ ಅರಸು ಮಂಜಿಷ್ಣಾರ್ ದೈವದ ಅಣ್ಣ ದೈವದ ಪಾತ್ರಿ ರಾಜ ಬೆಳ್ಚಪ್ಪಾಡರು ಮಾತನಾಡಿ ಈ ಕ್ಷೇತ್ರದ ಜೀರ್ಣೋದ್ದಾರ ಕೆಲಸಗಳು ಸಾಂಗವಾಗಿ ನೆರವೇರಿ ಬ್ರಹ್ಮಕಲಶ ನೋಡುವ ಭಾಗ್ಯ ನಮಗೆಲ್ಲರಿಗೂ ಆದಷ್ಟು ಬೇಗ ಸಿಗಲಿ ಎಂದು ಹಾರೈಸಿದರು.


ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರದ ಜೀರ್ಣೋದ್ಧಾರದ ನಿಧಿ ಸಂಚಯದ ಕೂಪನ್ ಗಳನ್ನು ಮಾಣಿಲ ಶ್ರೀ ಗಳು ದಾನಿಗಳಿಗೆ ನೀಡಿ ಬಿಡುಗಡೆ ಮಾಡಿದರು. ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ಅನುವಂಶೀಯ ಮೊಕ್ತೇಸರ ಗೋವಿಂದ ಗುರುಸ್ವಾಮಿ, ವರ್ಕಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೇವಪ್ಪ ಶೆಟ್ಟಿ ಚಾವಡಿಬೈಲು, ನೆತ್ತಿಲ ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಪ್ರೇಮಾನಂದ ರೈ ನೆತ್ತಿಲ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಂಗ ಸ್ವರೂಪ (ರಿ.) ಕುಂಜತ್ತಬೈಲ್ ವತಿಯಿಂದ ಬೇಸಿಗೆ ಶಿಬಿರ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ

ಕಾವೂರು: ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಆಯೋಜಿಸಿದ ರಂಗೋತ್ಸವ 2026' 4ದಿನಗಳ...

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...