ಬಂಟ್ವಾಳ ಪುರಸಭೆಯ ಅವ್ಯವಹಾರಗಳ ಕುರಿತು ಜಿಲ್ಲಾಧಿಕಾರಿಗೆ ಎಸ್‌ಡಿಪಿಐ ಮನವಿ

Date:

ಬಂಟ್ವಾಳ: ಬಂಟ್ವಾಳ ಪುರಸಭೆಯಲ್ಲಿ ನಡೆಯುತ್ತಿರುವ ಅವ್ಯವಹಾರಗಳು, ಆಡಳಿತಾತ್ಮಕ ಕುಂದುಕೊರತೆಗಳು ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ ವಿವಿಧ ಸಮಸ್ಯೆಗಳ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ನಿಯೋಗವು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್.ವಿ. ಅವರನ್ನು ಭೇಟಿ ಮಾಡಿ, ಅವ್ಯವಹಾರಗಳ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಮನವಿ ಸಲ್ಲಿಸಿತು.

ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್.ಎಚ್. ಅವರ ನೇತೃತ್ವದಲ್ಲಿ ನಡೆದ ಈ ಭೇಟಿ ವೇಳೆ ಪುರಸಭೆಯ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವ ಅಗತ್ಯತೆ, ಸಾರ್ವಜನಿಕ ಸೇವೆಗಳ ಸುಧಾರಣೆ ಹಾಗೂ ಬಾಕಿ ಇರುವ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಸಂಬಂಧಿಸಿದಂತೆ ವಿವರವಾದ ಚರ್ಚೆಯನ್ನು ನಡೆಸಿ, ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಕೂಡಲೇ ಬಂಟ್ವಾಳ ಪುರಸಭೆಗೆ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸುವ ಹಾಗೂ ಅವ್ಯವಹಾರ ಪತ್ತೆ ಹಚ್ಚಲು ಉನ್ನತ ಮಟ್ಟದ ತನಿಖೆಯ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು ಹಾಗೂ ಪಾಣೆಮಂಗಳೂರು ಸಿಟಿ ಕೌನ್ಸಿಲ್ ಕಾರ್ಯದರ್ಶಿ ಇಮ್ರಾನ್ ಬಂಟ್ವಾಳ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...