ಕರಾಟೆ ಕಲೆ ಶಿಸ್ತಿನೊಂದಿಗೆ ದೈಹಿಕ ಸಾಮಥ್ಯ೯ವನ್ನು ವೃದ್ಧಿಸುತ್ತದೆ

Date:

ಮೂಡಬಿದಿರೆ: ಕರಾಟೆ ಕಲೆಯು ಶಿಸ್ತು, ಆತ್ಮವಿಶ್ವಾಸ ಹಾಗೂ ದೈಹಿಕ ಸಾಮರ್ಥ್ಯವನ್ನು ವೃದ್ಧಿಸುತ್ತದೆ ಎಂದು ಮೈ ಚಾಯ್ಸ್ ಮೆನ್ಸ್ ಪಾರ್ಲರ್ ಗ್ರೂಪ್‌ನ ಮಾಲೀಕ ಕೆ. ಎನ್. ಪ್ರಕಾಶ್ ಅಭಿಪ್ರಾಯಪಟ್ಟರು. ಅವರು ರತನ್ ಗ್ಯಾರೆಜ್ ಬಳಿಯಿರುವ ಸಿಟಿ ಲೈಟ್ ಆರ್ಕೇಡ್ ಸಂಕೀರ್ಣದಲ್ಲಿ ಕರಾಟೆ ತರಬೇತಿ ಸಂಸ್ಥೆ ಶೋರಿನ್ ರಿಯೂ ಇದರ ನೂತನ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ನಮ್ಮ ಬೆದ್ರ ಪತ್ರಿಕೆಯ ಸಂಪಾದಕ ಅಶ್ರಫ್ ವಾಲ್ಪಾಡಿ ಮಾತನಾಡಿ, ನದೀಂ ಹಾಗೂ ಸರ್ಫರಾಜ್ ಅವರು ಮೂಡುಬಿದಿರೆಯಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದಾರೆ. ರಾಷ್ಟ್ರ, ರಾಜ್ಯಮಟ್ಟದಲ್ಲಿ ಅವರ ವಿದ್ಯಾರ್ಥಿಗಳು ಸಾಧನೆ ಮಾಡುತ್ತಿರುವುದೇ ಇದಕ್ಕೆ ಸಾಕ್ಷಿ ಎಂದರು.

ಪತ್ರಕರ್ತ ಯಶೋದರ ಬಂಗೇರ, ಕಾರ್ಮಿಕ ಮುಖಂಡ ಯಾದವ ಶೆಟ್ಟಿ, ವಿದ್ಯಾಗಿರಿಯ ಭಾರತ್ ಚಿಕನ್ ಸೆಂಟರ್‌ನ ಎಂ. ಎಸ್. ಜೈನುದ್ದೀನ್, ರಾಜ್ಯ ಕರಾಟೆ ಶಿಕ್ಷಕರ ಸಂಘ ಅಧ್ಯಕ್ಷ ಮೊಹಮ್ಮದ್ ನದೀಮ್, ದಕ್ಷಿಣ ಕನ್ನಡ ಜಿಲ್ಲೆ ಕರಾಟೆ ಶಿಕ್ಷಕರ ಸಂಘದ ಉಪಾಧ್ಯಕ್ಷ ಅರುಣ್ ಕುಮಾರ್ ನಿಟ್ಟೆ , ಸಂಸ್ಥೆಯ ಮಾರ್ಗದರ್ಶಕರಾದ ಅಬೂಬಕ್ಕರ್ ಪುತ್ತಿಗೆ, ಅಬೂಬಕ್ಕರ್‌ ಹಂಡೇಲು, ಹಫೀಝ್ ಬೆದ್ರ ಉಪಸ್ಥಿತರಿದ್ದರು.ಕಾರ್ಯಕ್ರಮದ ಆಯೋಜಕ ಸಫ್ರಾಜ್ ಅಬ್ದುಲ್ ಖಾದ್ರಿ ಅವರು ಅತಿಥಿಗಳನ್ನು ಗೌರವಿಸಿ, ಕರಾಟೆ ತರಬೇತಿ ಕೇಂದ್ರದ ಉದ್ದೇಶಗಳು ಹಾಗೂ ಮುಂದಿನ ಯೋಜನೆಗಳ ಕುರಿತು ಮಾಹಿತಿ ನೀಡಿದರು. ರಫೀಜ್ ಬೆದ್ರ ಕಾರ್ಯಕ್ರಮ ನಿರೂಪಿಸಿದರು

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...