ಸುಂಕದಕಟ್ಟೆ–ನವರಂಗ ಕಾಂಪೌಂಡ್ ರಸ್ತೆ–ಚರಂಡಿ ಸಮಸ್ಯೆ: ತಕ್ಷಣ ಕಾಮಗಾರಿ ಆರಂಭಿಸಲು ಎಸ್‌ಡಿಪಿಐ ಆಗ್ರಹ

Date:

ಬಜ್ಪೆ: ಸುಂಕದಕಟ್ಟೆ ನವರಂಗ ಕಾಂಪೌಂಡ್ ಸಮೀಪದ ರಸ್ತೆ ಬದಿಯ ಚರಂಡಿಯಲ್ಲಿ ಕಳೆದ ಆರು ವರ್ಷಗಳಿಂದ ಮಣ್ಣು ತುಂಬಿಕೊಂಡಿರುವುದರಿಂದ, ಮಳೆಗಾಲದ ಸಮಯದಲ್ಲಿ ಮಳೆಯ ನೀರು ಸರಾಗವಾಗಿ ಹರಿಯದೆ ರಸ್ತೆಯ ಮೇಲೆಯೇ ಹರಿದು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಪರಿಣಾಮವಾಗಿ ಸ್ಥಳೀಯ ನಾಗರಿಕರು ಪ್ರತಿವರ್ಷ ಎರಡು ಬಾರಿ ತಾತ್ಕಾಲಿಕವಾಗಿ ಮಣ್ಣು ಹಾಕುವ ಮೂಲಕ ಸಮಸ್ಯೆಯನ್ನು ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.


ಈ ಗಂಭೀರ ಸಮಸ್ಯೆಯ ಕುರಿತು ಸ್ಥಳೀಯ ನಾಗರಿಕರು ಒಟ್ಟಾಗಿ ಪಿಡಬ್ಲ್ಯೂಡಿ ಇಂಜಿನಿಯರನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿದ್ದು, ಶಾಶ್ವತ ಪರಿಹಾರವಾಗಿ ಸಮರ್ಪಕ ಚರಂಡಿ ವ್ಯವಸ್ಥೆ ಹಾಗೂ ಪರ್ಯಾಯ ರಸ್ತೆ ನಿರ್ಮಾಣ ಅಗತ್ಯವಿದೆ ಎಂದು ಮನವಿ ಸಲ್ಲಿಸಲಾಗಿದೆ. ಈ ವಿಷಯವನ್ನು ಪಂಚಾಯಿತಿ ವಾರ್ಡ್ ಸಭೆಯಲ್ಲಿಯೂ ಲಿಖಿತವಾಗಿ ದಾಖಲಿಸಲಾಗಿದೆ.
ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಹಣ ಮಂಜೂರಾಗಿ ಈಗಾಗಲೇ ಏಳು ತಿಂಗಳು ಕಳೆದಿದ್ದರೂ, ಇನ್ನೂ ಕಾಮಗಾರಿ ಪ್ರಾರಂಭವಾಗದೇ ಇರುವುದರಿಂದ ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ಹಾಗೂ ಆತಂಕ ಹೆಚ್ಚಾಗಿದೆ.


ಇದೇ ಸಂದರ್ಭದಲ್ಲಿ ಸೌಹಾರ್ದನಗರದ ಮುಖ್ಯ ರಸ್ತೆ ಕಾಂಕ್ರಿಟೀಕರಣಗೊಂಡ ಬಳಿಕ ರಸ್ತೆ ಬದಿಯಲ್ಲಿ ಮಣ್ಣು ತುಂಬಿದ್ದರಿಂದ, ಅಲ್ಲಿಂದ ಸಂಚರಿಸುವ ವಾಹನಗಳ ಅಡಿಭಾಗಕ್ಕೆ ತಾಗುವ ಅಪಾಯ ಎದುರಾಗಿತ್ತು. ಈ ಸಮಸ್ಯೆಯನ್ನು ಪಿಡಬ್ಲ್ಯೂಡಿ ಇಂಜಿನಿಯರ್ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದ ಪರಿಣಾಮವಾಗಿ, ನಿನ್ನೆ ಕಾಂಕ್ರಿಟ್ ಮೂಲಕ ಮರುಜೋಡಣೆ ಕಾರ್ಯ ಕೈಗೊಳ್ಳಲಾಗಿದೆ. ಆದರೆ ಅದೇ ರೀತಿಯ ಗಂಭೀರ ಸಮಸ್ಯೆ ಎದುರಿಸುತ್ತಿರುವ ಸುಂಕದಕಟ್ಟೆ ನವರಂಗ ಕಾಂಪೌಂಡ್ ರಸ್ತೆಯ ಕಾಮಗಾರಿ ಇನ್ನೂ ಪ್ರಾರಂಭವಾಗದೇ ಇರುವುದರಿಂದ, ಇದನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕಾಮಗಾರಿ ಆರಂಭಿಸಬೇಕೆಂದು ಎರಡನೇ ಬಾರಿ ಮನವಿ ಸಲ್ಲಿಸಲಾಗಿದೆ.


ಮಾನ್ಯ ಜಿಲ್ಲಾಧಿಕಾರಿಗಳು ತಕ್ಷಣ ಮಧ್ಯಸ್ಥಿಕೆ ವಹಿಸಿ, ಸುಂಕದಕಟ್ಟೆ – ನವರಂಗ ಕಾಂಪೌಂಡ್ ರಸ್ತೆ ಹಾಗೂ ಚರಂಡಿ ಕಾಮಗಾರಿಗಳನ್ನು ಆದಷ್ಟು ಬೇಗ ಪ್ರಾರಂಭಿಸಿ, ಮಳೆಗಾಲದ ಮುನ್ನ ಸಾರ್ವಜನಿಕರಿಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ತುಳುನಾಡ ರಕ್ಷಣಾ ವೇದಿಕೆ ಹಾಗೂ ಸ್ಥಳೀಯ ನಾಗರಿಕರ ಪರವಾಗಿ ಕಳಕಳಿಯಿಂದ ಆಗ್ರಹಿಸುತ್ತೇನೆ ಎಂದು ಎಸ್‌ಡಿಪಿಐ ಮುಖಂಡ ಅಬ್ದುಲ್ ಹಮೀದ್ ಕೊಳಂಬೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...