ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಮೇಲ್ತೆನೆಯ ಸಹಯೋಗದಲ್ಲಿ ಎಪ್ರಿಲ್ 14ರಂದು ಮುಡಿಪು ಜಂಕ್ಷನ್‌ನಲ್ಲಿ ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು ಎಂದು ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್. ತಿಳಿಸಿದ್ದಾರೆ.

ನಾಟೆಕಲ್ ವಿಜಯನಗರದ ಇಲೈಟ್ ಟ್ಯೂಶನ್ ಸೆಂಟರ್‌ನಲ್ಲಿ ರವಿವಾರ ನಡೆದ ಮೇಲ್ತೆನೆಯ ಮಾಸಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ತಾಲೂಕು, ಜಿಲ್ಲಾ, ರಾಜ್ಯ ಮತ್ತು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಸುವ ಉದ್ದೇಶವಿದೆ. ಈಗಾಗಲೆ ಮಂಗಳೂರು ತಾಲೂಕು ಸಾಹಿತ್ಯ ಸಮ್ಮೇಳನ ನಡೆಸಲಾಗಿದೆ. ಕೊಡಗಿನಲ್ಲಿ ಜಿಲ್ಲಾ ಮಟ್ಟದ ಮತ್ತು ಚಿಕ್ಕಮಗಳೂರಿನಲ್ಲಿ ರಾಜ್ಯ ಮಟ್ಟದ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದರು.
ಈ ಸಂದರ್ಭ ಮೇಲ್ತೆನೆ ಇ-ಮ್ಯಾಗಝಿನ್ ಎಗ್ಗೆ-2 ನ್ನು ಉಮರ್ ಯು.ಎಚ್. ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಮೇಲ್ತೆನೆಯ ಗೌರವಾಧ್ಯಕ್ಷ ಆಲಿಕುಂಞಿ ಪಾರೆ, ಅಧ್ಯಕ್ಷ ಮಂಗಳೂರು ರಿಯಾಝ್, ಪ್ರಧಾನ ಕಾರ್ಯದರ್ಶಿ ಹಂಝ ಮಲಾರ್, ಕೋಶಾಧಿಕಾರಿ ವಿ. ಇಬ್ರಾಹಿಂ ನಡುಪದವು, ಉಪಾಧ್ಯಕ್ಷ ಇಬ್ರಾಹಿಂ ಮುದುಂಗಾರುಕಟ್ಟೆ, ಜೊತೆ ಕಾರ್ಯದರ್ಶಿ ಸಿ.ಎಂ ಶರೀಫ್ ಪಟ್ಟೋರಿ, ಮಾಜಿ ಅಧ್ಯಕ್ಷರಾದ ಟಿ. ಇಸ್ಮಾಯಿಲ್ ಮಾಸ್ಟರ್, ಬಶೀರ್ ಅಹ್ಮದ್ ಕಿನ್ಯ, ಮನ್ಸೂರ್ ಅಹ್ಮದ್ ಸಾಮಣಿಗೆ, ಮುಹಮ್ಮದ್ ಬಾಷಾ ನಾಟೆಕಲ್, ಬಶೀರ್ ಕಲ್ಕಟ್ಟ, ಸದಸ್ಯರಾದ ಯೂಸುಫ್ ವಕ್ತಾರ್, ಬಿ.ಎಂ. ಕಿನ್ಯ, ಅಬೂಬಕರ್ ಹೂಹಾಕುವ ಕಲ್ಲು, ಸಿದ್ದೀಕ್ ಎಸ್. ರಾಝ್ ಉಪಸ್ಥಿತರಿದ್ದರು.


