ರಾಜ್ಯಮಟ್ಟದ ಯುವಜನೋತ್ಸವ: ತಾಂತ್ರಿಕ ಶಿಕ್ಷಣ ಇಲಾಖೆಗೆ ಸಮಗ್ರ ಪ್ರಶಸ್ತಿ

Date:

ಮೂಡಬಿದಿರೆ: ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಅಂತರ್ ವಿಶ್ವವಿದ್ಯಾಲಯದ ಯುವಜನೋತ್ಸವವು ಬಾಗಲಕೋಟೆಯ ಬಿ.ವಿ.ವಿ.ಎಸ್ ಪಾಲಿಟೆಕ್ನಿಕ್ ನಲ್ಲಿ ಒಂದು ವಾರಗಳ ಕಾಲ ವಿಜೃಂಭಣೆಯಿಂದ ನಡೆಯಿತು.

ಯುವಜನೋತ್ಸವದಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಪ್ರದರ್ಶಿಸಿ ಅನೇಕ ಬಹುಮಾನಗಳನ್ನು ಪಡೆದುಕೊಂಡರು. ಅಲ್ಲದೆ ಸಮಗ್ರ ಪ್ರಶಸ್ತಿಯೂ ಲಭಿಸಿದೆ.

ತಾಂತ್ರಿಕ ಶಿಕ್ಷಣ ಇಲಾಖೆಯು ಆಯ್ಕೆ ಮಾಡಿದ ವಿದ್ಯಾರ್ಥಿಗಳ ಪೈಕಿ ಆರು ಮಂದಿ ಎಸ್ ಎನ್ ಎಂ ಪಾಲಿಟೆಕ್ನಿಕ್ ಮೂಡುಬಿದಿರೆಯ ಸ್ವಯಂಸೇವಕರು ಆಗಿದ್ದಾರೆ. ಇವರ ಸಕ್ರಿಯ ಭಾಗವಹಿಸುವಿಕೆ ಮತ್ತು ಕಠಿಣ ಪರಿಶ್ರಮ ಈ ಸಾಧನೆಗೆ ಕಾರಣವಾಗಿದೆ. ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...