ಬ್ರೇಕಿಂಗ್ ನ್ಯೂಸ್: ಕೈಕಂಬದಲ್ಲಿ ನಾಳೆ ಸಾಮೂಹಿಕ ಪ್ರತಿಭಟನೆಗೆ ನಾಗರಿಕ ಹೋರಾಟ ಸಮಿತಿ ಕರೆ

Date:

ಗುರುಪುರ, ಕೈಕಂಬ: ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಕೈಕಂಬ ಪೇಟೆಯಲ್ಲಿ ಇತ್ತೀಚೆಗೆ ನಿರ್ಮಾಣವಾಗುತ್ತಿರು ತಡೆಗೋಡೆ ಮಾದರಿಯ ಮೇಲ್ಸೇತುವೆ ನಿರ್ಮಾಣ ಬದಲು ತೆರೆದ ಮೇಲ್ಸೇತುವೆಯನ್ನು ಕೈಕಂಬ ಮಾರ್ಕೇಟ್ ವರೆಗೆ ವಿಸ್ತರಿಸಬೇಕು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ತೆರೆದ ಮಾದರಿಯ ಫ್ಲೈಓವರ್ ನಿರ್ಮಾಣಕ್ಕೆ ಆಗ್ರಹಿಸಿ, ಕೈಕಂಬ ನಾಗರಿಕ ಹೋರಾಟ ಸಮಿತಿ ವತಿಯಿಂದ ನಾಳೆ (16-02-2026) ಬೆಳಿಗ್ಗೆ 10:00 ಗಂಟೆಗೆ ಕೈಕಂಬ ಜಂಕ್ಷನ್‌ನಲ್ಲಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ.

ಈ ನಿರ್ಧಾರವನ್ನು ಇಂದು ನಡೆದ ಸಭೆಯಲ್ಲಿ ಏಕಾಭಿಪ್ರಾಯಲ್ಲಿ ಅಂಗೀಕರಿಸಲಾಗಿದೆ ಎಂದು ಸಮಿತಿ ತಿಳಿಸಿದೆ. ಸ್ಥಳೀಯರ ಅಭಿಪ್ರಾಯದಂತೆ, ಪಿಲ್ಲರ್‌ಗಳ ಮೇಲೆ ತೆರೆದ ಮೇಲ್ಸೇತುವೆ ನಿರ್ಮಾಣವಾಗದಿದ್ದರೆ ವ್ಯಾಪಾರ ಚಟುವಟಿಕೆಗಳಿಗೆ, ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಹಾಗೂ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಭಕ್ತಾದಿಗಳಿಗೆ ಹೆಚ್ಚಿನ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಹಕ್ಕಿನ ಬೇಡಿಕೆಗೆ ಬೆಂಬಲ ನೀಡುವಂತೆ ಸಮಿತಿ ಮನವಿ ಮಾಡಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...