ಕಾರ್ಮಿಕರ ಹಕ್ಕುಗಳನ್ನು ಕಡಿತಗೊಳಿಸಿ ಕಂಪೆನಿಗಳಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡುವ ಸರ್ಕಾರದ ಕ್ರಮ ಅಸಂವಿಧಾನಿಕ -ಎಸ್ಡಿಟಿಯು

Date:

ಬೆಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆ ರಾಜ್ಯ ಸಂಚಾಲಕ ಅಥಾವುಲ್ಲಾ ಜೋಕಟ್ಟೆ ರವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ರವಿವಾರ ನಡೆಯಿತು.


SDTU ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಫಾರೂಕು ತಮಿಳ್ ನಾಡು, ರಾಜ್ಯ ಉಸ್ತುವಾರಿ ರಹೀಮ್ ಪಟೇಲ್, ಸಹ ಸಂಚಾಲಕ ಖಾದರ್ ಫರಂಗಿಪೇಟೆ, ಶಫಿ ರಾಯಚೂರು, ಸದಸ್ಯರಾದ ಅಬೂಬಕ್ಕರ್ ಮದ್ದ, ಇಮ್ರಾನ್ ಬೆಳಗಾವಿ,ಅಲ್ತಾಫ್ ಮೈಸೂರು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ಕೈಗೊಂಡ ನಿರ್ಣಯಗಳು:
-ಭಾರತದಲ್ಲಿ ಹಿಂದಿನ ವ್ಯವಸ್ಥೆಯಲ್ಲಿ ಹಲವು ಕೇಂದ್ರ ಕಾರ್ಮಿಕ ಕಾಯ್ದೆಗಳು (Central Labour Laws) ಜಾರಿಯಲ್ಲಿದ್ದವು. ಅವುಗಳನ್ನು ಕೇಂದ್ರ ಸರಕಾರ ನಾಲ್ಕು ಕಾಯ್ದೆಗಳಾಗಿ ಮಾರ್ಪಡುಗೊಳಿಸಿದೆ, ಈ ಕಾನೂನುಗಳು ಕಾರ್ಮಿಕರ ಹಕ್ಕುಗಳಲ್ಲಿ ಕಡಿತಗೊಳ್ಳುವ ಸಾಧ್ಯತೆಗಳಿವೆ, ಕಂಪನಿಗಳಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಲಾಗಿದೆ ಅನುಷ್ಠಾನದಲ್ಲಿಯೂ ಅಸ್ಪಷ್ಟತೆ ಕಂಡು ಬರುತ್ತಿದೆ ಇದನ್ನು ರದ್ದುಗೊಳಿಸಿ ಹಿಂದಿನ ಕಾನೂನುಗಳನ್ನೇ ಸಮರ್ಪಕವಾಗಿ ಜಾರಿಗೊಳಿಸಬೇಕು.

-ಕರ್ನಾಟಕ ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಅನೇಕ ಪದವೀಧರರು ಉತ್ತಮ ಶಿಕ್ಷಣ ಪಡೆದಿದ್ದರೂ, ತಮ್ಮ ಅರ್ಹತೆಗೆ ತಕ್ಕ ಉದ್ಯೋಗಾವಕಾಶಗಳ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ನಗರ ಪ್ರದೇಶಗಳಲ್ಲಿ ಉದ್ಯೋಗ ಅವಕಾಶಗಳು ಹೆಚ್ಚು ಇದ್ದರೂ, ಗ್ರಾಮಾಂತರ ಯುವಕರಿಗೆ ಮಾಹಿತಿ ಕೊರತೆ, ಮಾರ್ಗದರ್ಶನದ ಅಭಾವ ಹಾಗೂ ಆರ್ಥಿಕ ಅಡಚಣೆಗಳಿಂದ ಅವಕಾಶಗಳು ಸಿಗುವುದಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಗ್ರಾಮಾಂತರ ಪ್ರದೇಶಗಳಲ್ಲೇ ವಿಶೇಷ ಉದ್ಯೋಗ ಕ್ಯಾಂಪ್ಗಳನ್ನು ಆಯೋಜಿಸುವುದು ಅತ್ಯಾವಶ್ಯಕವಾಗಿದೆ.


-ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಮಕ್ಕಳಿಗೆ ಪದವಿಯವರೆಗೆ ಸರಕಾರ ಉಚಿತ ಶಿಕ್ಷಣ ನೀಡಬೇಕು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...