ಎಮ್.ಕೆ. ಫೈಝಿ ಅವರಿಗೆ ಜಾಮೀನು ಮಂಜೂರು: ದೇಶದ ಧ್ವನಿಯಿಲ್ಲದ ಸಮುದಾಯಗಳಿಗೆ ದೊರೆತ ಕಾನೂನಿನ ವಿಜಯ – ಅನ್ವರ್ ಸಾದತ್ ಬಜತ್ತೂರು

Date:

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಅವರಿಗೆ ದೆಹಲಿ ಹೈಕೋರ್ಟ್ ನಲ್ಲಿ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬಿ.ಸಿ. ರೋಡ್ ಕೈಕಂಬದಲ್ಲಿರುವ ಪಕ್ಷದ ಕಚೇರಿ ಮುಂಭಾಗದಲ್ಲಿ ವಿಜಯೋತ್ಸವ ಸಂಭ್ರಮಾಚರಣೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಅವರು, “ದೇಶದ ಧ್ವನಿಯಿಲ್ಲದ ಸಮುದಾಯಗಳಿಗೆ ದೊರೆತ ಕಾನೂನಿನ ವಿಜಯ ಇದಾಗಿದೆ. ನ್ಯಾಯಾಂಗದ ಮೇಲೆ ಜನರ ವಿಶ್ವಾಸವನ್ನು ಬಲಪಡಿಸುವ ತೀರ್ಪು ಇದಾಗಿದ್ದು, ಸತ್ಯ ಮತ್ತು ನ್ಯಾಯ ಅಂತಿಮವಾಗಿ ಗೆಲ್ಲುತ್ತವೆ ಎಂಬುದನ್ನು ಈ ತೀರ್ಪು ಮತ್ತೊಮ್ಮೆ ಸಾಬೀತುಪಡಿಸಿದೆ. ಸಮಾಜದ ಹಕ್ಕುಗಳಿಗಾಗಿ ಹೋರಾಡುವ ನಾಯಕತ್ವವನ್ನು ಮೌನಗೊಳಿಸಲು ನಡೆದ ಎಲ್ಲಾ ಪ್ರಯತ್ನಗಳ ನಡುವೆಯೂ ನ್ಯಾಯ ದೊರೆತಿರುವುದು ಪ್ರಜಾಸತ್ತಾತ್ಮಕ ಮೌಲ್ಯಗಳ ಜಯವಾಗಿದೆ,” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಾಹುಲ್ ಹಮೀದ್ ಎಸ್ಎಚ್ ವಹಿಸಿದ್ದರು. ಪಕ್ಷದ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಹಾಗೂ ಅಭಿಮಾನಿಗಳು ಭಾಗವಹಿಸಿ ಸಿಹಿ ತಿಂಡಿ ಹಂಚಿಕೊಂಡು ಸಂಭ್ರಮಾಚರಣೆ ನಡೆಸಿದರು. ಕಾರ್ಯಕ್ರಮವನ್ನು ಅಕ್ಬರ್ ಅಲಿ ಪೊನ್ನೋಡಿ ನಿರೂಪಿಸಿ, ಧನ್ಯವಾದ ಅರ್ಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...