ಬಾಳೆ ಹೂವನ್ನು ಅರಳಿಸುವ ಮೂಲಕ ಕೆ.ಪಿ.ಎಸ್ ಮಿಜಾರು ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ಅನಾವರಣ

Date:

ಮೂಡಬಿದಿರೆ: ತಾಲೂಕಿನ ಕೆ.ಪಿ.ಎಸ್ ಮಿಜಾರ್ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಮಕ್ಕಳ ಸಂತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೂಡಬಿದಿರೆ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಅವರು ಬಾಳೆ ಹೂವನ್ನು ಅರಳಿಸುವ ಮೂಲಕ ಕಾಯ೯ಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಅತ್ಯುತ್ತಮ ಆಯೋಜನೆಯ ಬಗ್ಗೆ ಶ್ಲಾಘಿಸಿದರು. ಅಲ್ಲದೆ ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಪುಷ್ಪಾಲತಾ ಹಾಗೂ ಮಾಜಿ ಅಧ್ಯಕ್ಷ ಇಕ್ಬಾಲ್, ಪೋಷಕ ಸಮಿತಿ ಕಾರ್ಯದರ್ಶಿ ರಮಾನಂದ, ನಿವೃತ್ತ ಶಿಕ್ಷಕ ನಾಗೇಶ್ ಅವರು ಭಾಗವಹಿಸಿ ಶುಭ ಹಾರೈಸಿದರು.

ಮುಖ್ಯ ಶಿಕ್ಷಕಿ ನಾಗರತ್ನ ಶಿರೂರುರವರು ಸ್ವಾಗತಿಸಿದರು, ಶಿಕ್ಷಕಿ ಗೀತಾ ಕಾರ್ಯಕ್ರಮ ನಿರೂಪಿಸಿದರು. ಪ್ರೇಮಾ ರವರು ಧನ್ಯವಾದ ನೀಡಿದರು. ಶಿಕ್ಷಕಿಯರಾದ ಹೇಮಾವತಿ, ಚೈತ್ರಾ ಶೆಟ್ಟಿ ಹಾಗೂ ಇತರ ಎಲ್ಲಾ ಅತಿಥಿ ಶಿಕ್ಷಕರು ಸಹಕಾರ ನೀಡಿದರು.

ಮೂಡುಬಿದಿರೆ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುಧಾಕರ ಸಾಲ್ಯಾನ್, ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ್ವರಿ, ಬಿ.ಐ.ಆರ್.ಟಿ ಸುಶೀಲಾ, ತೆಂಕಮಿಜಾರು ಗ್ರಾಮದ ಮಾಜಿ ಅಧ್ಯಕ್ಷೆ ಶಾಲಿನಿ ಕೆ. ಸಾಲಿಯಾನ್, ಕೆ.ಪಿ.ಎಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಾ ಹಾಗೂ ಶಿಕ್ಷಕಿ ಪವಿತ್ರ ಅವರು ಆಗಮಿಸಿ ಮಕ್ಕಳು ಮಾರಾಟಕ್ಕಿಟ್ಟಿದ್ದ ವಸ್ತುಗಳನ್ನು ಖರೀದಿಸುವ ಮೂಲಕ ಪ್ರೋತ್ಸಾಹ ನೀಡಿದರು.

15 ಕ್ಕಿಂತ ಹೆಚ್ಚಿನ ವಿವಿದ ಬಗೆಯ ವಸ್ತುಗಳು, ಬಗೆ ಬಗೆಯ ತಿಂಡಿ ತಿನಿಸುಗಳು, ತಾಜಾ ಹಣ್ಣು ತರಕಾರಿಗಳ ಮಳಿಗೆಗಳ ಮೂಲಕ ಪೋಷಕರ ಹಾಗೂ ಊರವರ ಸಹಭಾಗಿತ್ವದಿಂದ ವಿದ್ಯಾಥಿ೯ಗಳು ಭರ್ಜರಿಯಾಗಿ ವ್ಯಾಪಾರ ವಹಿವಾಟು ನಡೆಸಿ ಉತ್ತಮ ಲಾಭವನ್ನು ಗಳಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...