ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯ ಸುಜೀತ್ ಮಾಡೂರು 6ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ

Date:

ಉಳ್ಳಾಲ: ಬಿಜೆಪಿ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸಿ ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯರಾಗಿರುವ ಸುಜೀತ್ ಮಾಡೂರು ಅವರನ್ನು ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.


ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಫೆ.19ರಂದು ಹೊರಡಿಸಿದ ಆದೇಶದಲ್ಲಿ, ಸುಜೀತ್ ಮಾಡೂರು ಅವರು ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಆದೇಶದ ಪ್ರತಿಯನ್ನು ಮಂಗಳೂರು ಮಂಡಲ ಬಿಜೆಪಿ ಅಧ್ಯಕ್ಷರಾದ ಜಗದೀಶ್ ಆಳ್ವ ಅವರಿಗೆ ಕಳುಹಿಸಲಾಗಿದೆ.
ಈ ಬೆಳವಣಿಗೆ ಕೋಟೆಕಾರ್ ಪಟ್ಟಣ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.


ಜ.29 ರಂದು ಕೋಟೆಕಾರ್ ಪಟ್ಟಣ ಪಂಚಾಯತಿನಲ್ಲಿ ಜರಗಿದ ಸಾಮಾನ್ಯ ಸಭೆಯಲ್ಲಿ ಸುಜಿತ್ ಮಾಡೂರು ಇವರು 15 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನಿವೇಶನ ರಹಿತರ ಅರ್ಜಿಗಳ ವಿಲೇವಾರಿ ಆಗದೇ ಇರುವ ಕುರಿತು ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಬಡವರ ಪರವಾಗಿ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರು. ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ ಆಡಳಿತ ಇರುವ ಹಿನ್ನೆಲೆಯಲ್ಲಿ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಅನ್ನುವ ಆರೋಪ ವ್ಯಕ್ತವಾಗಿತ್ತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...