ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

Date:


ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ ಸಂಚರಿಸುತ್ತಿದ್ದ ಭವಾನಿ ಬಸ್‌ನ ನಿರ್ವಾಹಕರ ಮೇಲೆ ಕಾಲೇಜು ವಿದ್ಯಾರ್ಥಿಗಳಿಂದ ಹಲ್ಲೆ ನಡೆದಿರುವ ಘಟನೆ ಅತ್ಯಂತ ಖಂಡನೀಯ ಹಾಗೂ ವಿಷಾದನೀಯವಾಗಿದೆ. ಕರ್ತವ್ಯ ನಿರ್ವಹಿಸುತ್ತಿರುವ ಸಾರ್ವಜನಿಕ ಸಾರಿಗೆ ನೌಕರರ ಮೇಲೆ ಹಲ್ಲೆ ನಡೆಸುವುದು ಕಾನೂನುಬಾಹಿರ ಕೃತ್ಯವಾಗಿದ್ದು, ಇದು ಸಮಾಜದ ಶಾಂತಿ ಮತ್ತು ಶಿಸ್ತಿಗೆ ಧಕ್ಕೆಯಾಗಿದೆ. ಈ ಘಟನೆಯನ್ನು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘ ತೀವ್ರವಾಗಿ ಖಂಡಿಸುತ್ತದೆ.

ಘಟನೆ ಸಂಬಂಧ ಪೊಲೀಸ್ ಇಲಾಖೆ ತಕ್ಷಣ ಪ್ರಕರಣ ದಾಖಲಿಸಿ, ಸಮಗ್ರ ತನಿಖೆ ನಡೆಸಿ, ಆರೋಪಿಗಳನ್ನು ಪತ್ತೆಹಚ್ಚಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವಂತೆ ನಾವು ವಿನಂತಿಸುತ್ತೇವೆ. ಖಾಸಗಿ ಬಸ್ ನೌಕರರ ಸುರಕ್ಷತೆ ಹಾಗೂ ಗೌರವವನ್ನು ಕಾಪಾಡುವುದು ಆಡಳಿತದ ಮತ್ತು ಸಮಾಜದ ಜವಾಬ್ದಾರಿಯಾಗಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಗಟ್ಟಲು ಅಗತ್ಯ ಕಾನೂನು ಹಾಗೂ ಶಿಸ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘದ ಅಧ್ಯಕ್ಷರಾದ ಉಸ್ಮಾನ್ ಅಲ್ತಾಫ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ಉಚಿತ ಟ್ಯೂಷನ್: ಸಮಾರೋಪ

ಉಚಿತ ಟ್ಯೂಷನ್: ಸಮಾರೋಪ ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ....