ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

Date:

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ.


ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ ತೊಡಗಿದ್ದ ಎಂಟು ವರ್ಷದ ಹೆಣ್ಣು ಮಗುವೊಂದು ಆಟದಲ್ಲಿ ಬಳಸಲಾಗುವ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.


ಮೂಲತ: ಕಾಸರಗೋಡು ಜಿಲ್ಲೆಯ ಮಧೂರು ಉಳಿಯತಡ್ಕ ನಿವಾಸಿ ರಾಜೇಶ್ ಗಟ್ಟಿ,ಮತ್ತು ರಾಜೇಶ್ವರಿ ದಂಪತಿಯ ಎರಡನೇ ಪುತ್ರಿ ತನುಷ್ಕ (8) ಮೃತ ದುರ್ದೈವಿ. ಮೃತ ತನುಷ್ಕ ಅವರ ತಾಯಿ ಉಳ್ಳಾಲದ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು ಉದ್ಯೋಗಕ್ಕೆ ತೆರಳಲು ಹತ್ತಿರವಾಗಲು ಕುಟುಂಬ ಸಮೇತ ಕೊಲ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು.

ಇಂದು ಮಧ್ಯಾಹ್ನ ಶಾಲೆಗೆ ರಜೆ ಇದ್ದ ಕಾರಣ ರಾಜೇಶ್ವರಿ ಅವರ ಎರಡನೇ ಮಗಳು ತನುಷ್ಕ ತನ್ನ ಅಣ್ಣ ಮತ್ತು ತಂಗಿಯ ಜತೆ ಲೂಡೊ ಆಟದಲ್ಲಿ ತೊಡಗಿದ್ದಳಂತೆ. ಈ ವೇಳೆ ತನುಷ್ಕ ಲೂಡೊ ಆಟದ ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿ ಏಕಾಏಕಿ ಉಸಿರು ಗಟ್ಟಿದ ಸ್ಥಿತಿಯಲ್ಲಿ ಗಂಭೀರಗೊಂಡಿದ್ದು ಗಾಭರಿಗೊಂಡ ಆಕೆಯ ತಾಯಿ ನೆರೆಹೊರೆಯವರ ಸಹಾಯದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಆಕೆಯನ್ನ ಚಿಕಿತ್ಸೆಗೆ ಒಯ್ದಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ತನುಷ್ಕ ಮೃತ ಪಟ್ಟಿರುವುದಾಗಿ ಘೋಷಿಸಿದ್ದಾರೆ.


ಬಾಲಕಿಯ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿದಾಗ ಆಕೆಯ ಶ್ವಾಸಕೋಶದಲ್ಲಿ ಪ್ಲಾಸ್ಟಿಕ್ ಕೋನ್ ಆಟಿಕೆ ಲಭಿಸಿದೆ.
ಮೃತ ತನುಷ್ಕ ತೊಕ್ಕೊಟ್ಟುವಿನ ಸಂತ ಸೆಬೆಸ್ಟಿಯನ್ ಹೈಸ್ಕೂಲ್ನ ಎರಡನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು. ಆಕೆಯ ಧಿಡೀರ್ ಸಾವಿನಿಂದ ಪೋಷಕರು ಸೇರಿದಂತೆ ಇಡೀ ಕುಟುಂಬವೇ ಆಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಸೇರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...