ಮಂಗಳೂರು: ಕನ್ನಡ ಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಬೆಳ್ಳಿಹಬ್ಬ ಸಂಭ್ರಮವು ಇತ್ತೀಚೆಗೆ ಮಂಗಳೂರು ಬಳಿಯ ಮರೋಳಿ ಸೂರ್ಯವುಡ್ಸ್ ನಲ್ಲಿ ಅತ್ಯಂತ ವೈಭವಯುತವಾಗಿ ನಡೆಯಿತು.
ಈ ಸಂಧರ್ಭ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದ ಸಾಧಕ, ಪುತ್ತೂರು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರೊ.ಜಯಂತ್ ನಡುಬೈಲು ರವರನ್ನು ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ, ಕ್ಯಾಪ್ಟನ್ ಬೃಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್, ಮಾಹೆ ಸಹ ಕುಲಾಧಿಪತಿ ಡಾ.ಹೆಚ್.ಎಸ್.ಬಲ್ಲಾಳ್, ಕನ್ನಡಪ್ರಭ ಪ್ರಧಾನ ಸಂಪಾದಕರಾದ ರವಿ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.


