ತಾಲೂಕು ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಆರೋಗ್ಯ ಅಧಿಕಾರಿಯನ್ನು ಭೇಟಿಯಾದ ಎಸ್ ಡಿ ಪಿ ಐ ನಿಯೋಗ

Date:

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್.ಎಚ್. ಅವರ ನೇತೃತ್ವದ ನಿಯೋಗವು ತಾಲೂಕು ಆರೋಗ್ಯಾಧಿಕಾರಿ ಡಾ|| ವಿಘ್ನೇಶ್ವರ್ ರವರನ್ನು ಭೇಟಿ ಮಾಡಿ, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕೆಂದು ಆಗ್ರಹಿಸಿತು.

ನಿಯೋಗದಲ್ಲಿ SDPI ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಹಾಗೂ ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷ ಶರೀಫ್ ವಳವೂರು ಉಪಸ್ಥಿತರಿದ್ದರು.

ನಿಯೋಗವು, ಕಳೆದ ತಿಂಗಳಿನಲ್ಲಿ ತಾಲೂಕು ಮುಖ್ಯ ವೈದ್ಯರಾದ ಡಾಕ್ಟರ್ ಪುಷ್ಪಲತಾ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಬಂಟ್ವಾಳ ತಾಲೂಕಿನ ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರಿ ಆಸ್ಪತ್ರೆಯ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವುದು ಹಾಗೂ ವೈದ್ಯಕೀಯ ಸೇವೆ ನಿರಂತರವಾಗಿ ಲಭ್ಯವಾಗುವಂತೆ ಮಾಡುವ ತುರ್ತು ಅಗತ್ಯವನ್ನು ಅಧಿಕಾರಿಗಳ ಗಮನಕ್ಕೆ ತಂದಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹರ್ರುತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಫುಟ್‌ಬಾಲ್ ಸಾಧನೆ

ಉಳ್ಳಾಲ: ಹಝ್ರುತ್ ಸಯ್ಯಿದ್ ಮದನಿ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಇಂದು...

ಪಿ.ಎ.ಇಂಜಿನಿಯರಿಂಗ್ ಕಾಲೇಜು: ಬಿ.ಇ.(ಹಾನರ್ಸ್) ಪದವೀಧರರಿಗೆ ಅಭಿನಂದನಾ ಸಮಾರಂಭ

ಕೊಣಾಜೆ: ಪದವಿ, ಶಿಕ್ಷಣದೊಂದಿಗೆ ನಾವು ಪಡೆದುಕೊಳ್ಳುವ ಕೌಶಲಗಳು ನಮ್ಮ ಬದುಕಿಗೆ ಸ್ಪೂರ್ತಿಯಾಗುತ್ತವೆ....

ಮಂಗಳೂರು ವಿವಿ 46 ನೇ ಸಂಸ್ಥಾಪನಾ ದಿನಾಚರಣೆ

ಕೋಣಾಜೆ: ಪ್ರಸ್ತುತ ಕಾಲಘಟ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಸ್ವಲ್ಪ ಆತಂಕದ ಸ್ಥಿತಿಯನ್ನು ಎದುರಿಸಿದರೂ...

ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ ಅವರಿಗೆ ಬಿಳ್ಕೊಡುಗೆ

ಬಂಟ್ವಾಳ: ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ...