ಉಳ್ಳಾಲ: ಮನುಷ್ಯನಿಗೆ ಆರೋಗ್ಯ ಇಲ್ಲದಿದ್ದರೆ ಕೋಟಿಗಟ್ಟಲೆ ಹಣವೂ ನಿಷ್ಪ್ರಯೋಜಕ. ಕರಾಟೆ ಎನ್ನುವುದು ಆತ್ಮರಕ್ಷಣೆಯ ಕಲೆಯೇ ಹೊರತು, ಹೊಡಿಬಡಿಯ ಕಲೆಯಲ್ಲ. ಕರಾಟೆಯಿಂದ ದೇಹ ಗಟ್ಟಿಮುಟ್ಟಾಗಿ ಶಿಸ್ತು ಕೂಡಾ ಬರುತ್ತದೆ ಎಂದು ಕರಾಟೆ ಅಸೋಸಿಯೇಷನ್ ದ.ಕ.ಜಿಲ್ಲಾಧ್ಯಕ್ಷ ಈಶ್ವರ್ ಕಟೀಲ್ ಹೇಳಿದರು.
ಸೋಮೇಶ್ವರ ಉಚ್ಚಿಲಗುಡ್ಡೆ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಮಂಗಳವಾರ ಉಚ್ಚಿಲದಲ್ಲಿ ನಡೆದ ದ.ಕ.ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಿತಿಯ ಬಾಲಕ-ಬಾಲಕಿಯರ ಕರಾಟೆ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಮಕ್ಕಳು ಮೊಬೈಲ್ ದಾಸರಾಗುವ ಮೂಲಕ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ, ಇದರ ಬದಲು ಪ್ರತಿದಿನ ಕ್ರೀಡೆಯಲ್ಲಿ ಭಾಗವಹಿಸಿ ಆರೋಗ್ಯ ವೃದ್ಧಿಸಿಕೊಳ್ಳಿ
ಎಂದು ತಿಳಿಸಿದರು.
ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುವನೇಶ್ ಮಾತನಾಡಿ, ಕ್ರೀಡಾಪಟಗಳು ತೀರ್ಪುಗಾರರು ನೀಡುವ ತೀರ್ಪಿಗೆ ಬದ್ಧರಾಗಿ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು, ಈ ಪಂದ್ಯಾಟದಲ್ಲಿ ಗೆದ್ದವರು ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ರಾಷ್ಟ್ರಮಟ್ಟದ ಕ್ರೀಡಾಪಟುವಾಗಿ ಹೊರಹೊಮ್ಮಲು ಪ್ರಯತ್ನಿಸಬೇಕು ಎಂದು ಅಭಿಪ್ರಾಯಪಟ್ಟರು.
ಸೋಮೇಶ್ವರ ಪುರಸಭೆಯ ಅಧ್ಯಕ್ಷೆ ಕಮಲಾ ಉದ್ಘಾಟಿಸಿದರು. ಸದಸ್ಯ ಅಬ್ದುಲ್ ಸಲಾಂ ಅಧ್ಯಕ್ಷತೆ ವಹಿಸಿದ್ದರು. ದೇರಳಕಟ್ಟೆ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲಾ ಸಂಚಾಲಕ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಉಪಾಧ್ಯಕ್ಷ ರವಿಶಂಕರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಹಸೀನಾ, ಉಚ್ಚಿಲ 405 ಜುಮಾ ಮಸೀದಿಯ ಅಧ್ಯಕ್ಷ ಇಸ್ಮಾಯಿಲ್, ಉದ್ಯಮಿಗಳಾದ ರಹೀಂ ಉಚ್ಚಿಲ್, ಅಬ್ಬಾಸ್ ಉಚ್ಚಿಲ್, ಕ್ರೀಡಾ ಪ್ರೋತ್ಸಾಹಕ ಅಬ್ದುಲ್ ಸಲಾಂ ಜೆ., ಕೋಶಾಧಿಕಾರಿ ಅಶೋಕ್, ಇನ್ಸ್ ಪೆಕ್ಟರ್ ವಿಕ್ಟರ್ ಡಿಸೋಜ, ರಾಜ್ಯ ಪ್ರಧಾನ ಕಾರ್ಯದರ್ಶಿ ತ್ಯಾಗಂ ಹರೇಕಳ, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷೆ ಜಯವಂತಿ ಸೋನ್ಸ್, ಶಾಹುಲ್ ಹಮೀದ್, ಸಿಆರ್ ಪಿ. ಗೀತಾ ಶೆಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಕೋಟೆಕಾರ್ ಪಟ್ಟಣ ಪಂಚಾಯಿತಿ ಸದಸ್ಯ ಇಸ್ಹಾಕ್, ದೈಹಿಕ ಶಿಕ್ಷಣ ತಾಲೂಕು ಪರಿವೀಕ್ಷಣಾಧಿಕಾರಿ ಲಿಲ್ಲಿ ಪಾಯ್ಸ್ ಮೊದಲಾದವರು ಉಪಸ್ಥಿತರಿದ್ದರು.
ಶಾಲೆಯ ಮುಖ್ಯಶಿಕ್ಷಕ ಹರೀಶ್ ಕುಮಾರ್ ಸ್ವಾಗತಿಸಿದರು. ಶಿಕ್ಷಕ ಚಂದ್ರಶೇಖರ ಸಿ.ಎಚ್. ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಶಿರ್ಲಾಲ್ ಕಾರ್ಯಕ್ರಮ ನಿರೂಪಿಸಿದರು.
ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕರಾಟೆ ಪಂದ್ಯಾಟ ಉದ್ಘಾಟನೆ
Date: