ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ‘ಪ್ರೀತಿಯ ಸಖ್ಯ’ ವಿಶೇಷ ಕಾರ್ಯಕ್ರಮ

Date:

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಕನ್ನಡ ವಿಭಾಗವು ಬೆಂಗಳೂರಿನ ಅಭಿನವ ಪ್ರಕಾಶನದ ಸಹಯೋಗದಲ್ಲಿ ‘ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ಪ್ರೀತಿಯ ಸಖ್ಯ’ ಎಂಬ ವಿಶೇಷ ಕಾರ್ಯಕ್ರಮವು ಕುವೆಂಪು ಸಭಾಂಗಣದಲ್ಲಿ ಶನಿವಾರ ನಡೆಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯರು ಬಹುಮುಖ ಚಿಂತಕರಾಗಿದ್ದು, ತಮ್ಮದೇ ಆದ ವಿಶಿಷ್ಟ ಓದುಗರ ವಲಯವನ್ನು ಹೊಂದಿದ್ದಾರೆ ಎಂದು ಹೇಳಿದರು. ಜನಸಾಮಾನ್ಯರ ಬದುಕಿಗೆ ಹತ್ತಿರವಾದ ಸಾಮಾಜಿಕ ವಿಚಾರಗಳನ್ನು ಆಧರಿಸಿ ಕೃತಿಗಳನ್ನು ರಚಿಸಿರುವುದು ಅವರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದರು.

ಆಳ್ವಾಸ್ ಕಾಲೇಜಿನ ಪ್ರಾಚಾರ್ಯ ಡಾ. ಕುರಿಯನ್ ಮಾತನಾಡಿ, ಸಾಹಿತ್ಯದಲ್ಲಿ ಅಪಾರ ಶಕ್ತಿ ಅಡಕವಾಗಿದೆ ಎಂಬುದನ್ನು ಸಮಾಜಕ್ಕೆ ಅರಿವು ಮೂಡಿಸಿದವರಲ್ಲಿ ನರಹಳ್ಳಿ ಪ್ರಮುಖರು. ಮಾನವತೆ ಮತ್ತು ವೈವಿಧ್ಯತೆಯ ನಡುವಿನ ಸಂಧಿಭೂತ ಪರಿಸ್ಥಿತಿಯಲ್ಲಿ ಜಗತ್ತು ಸಾಗುತ್ತಿರುವಾಗ, ಸಾಹಿತ್ಯ ಮತ್ತು ಸಾಹಿತಿಗಳು ಸಮಾಜದಲ್ಲಿ ಮಹತ್ತರ ಬದಲಾವಣೆಯನ್ನು ತರಬಲ್ಲ ಶಕ್ತಿಯನ್ನು ಹೊಂದಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಸಂವಾದದಲ್ಲಿ ಮಾತನಾಡಿದ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು, ಪ್ರೀತಿ ಎನ್ನುವುದು ವ್ಯಾಖ್ಯಾನಕ್ಕೆ ಸಿಗದ ವಿಶಾಲ ಭಾವನೆ. ಅದು ಸ್ವಾರ್ಥರಹಿತವಾಗಿದ್ದು, ಅನುಭವದ ಮೂಲಕವೇ ಅದರ ಸಾರ್ಥಕತೆಯನ್ನು ಅರಿಯಲು ಸಾಧ್ಯ ಎಂದು ಹೇಳಿದರು. ಕುವೆಂಪು, ಬೇಂದ್ರೆ, ಪುತಿನ ಹಾಗೂ ಕೆ.ಎಸ್. ನರಸಿಂಹಸ್ವಾಮಿ ಮುಂತಾದ ಕವಿಗಳು ಪ್ರೀತಿಯನ್ನು ವಿಭಿನ್ನ ರೀತಿಯಲ್ಲಿ ಸಾಹಿತ್ಯದಲ್ಲಿ ಚಿತ್ರಿಸಿರುವುದನ್ನು ವಿವರಿಸಿದರು. ಸಾಹಿತ್ಯ ಎಲ್ಲರನ್ನು ಒಳಗೊಂಡು ಕಾಲದ ತಲ್ಲಣಗಳಿಗೆ ಪರಿಹಾರ ನೀಡುವ ಶಕ್ತಿಯನ್ನು ಹೊಂದಿದೆ ಎಂದು ಹೇಳಿದರು.

ಮೈಸೂರು ಮಹಾಜನ ಕಾಲೇಜಿನ ಕನ್ನಡ ವಿಭಾಗದ ಡಾ.ಎಚ್. ಆರ್. ತಿಮ್ಮೇಗೌಡ ಅವರು ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯರ ಜೀವನಪ್ರೀತಿ ಮತ್ತು ವ್ಯಕ್ತಿತ್ವ ಕುರಿತು ಮಾತನಾಡಿದರು. ಹೊನ್ನಾವರದ ಎಸ್‌ಡಿಎಂ ಕಾಲೇಜಿನ ಕನ್ನಡ ವಿಭಾಗದ ನಾಗರಾಜ ಹೆಗಡೆ ಅವರು ಅವರ ಸಾಹಿತ್ಯಪ್ರೀತಿ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.

ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಸುಧಾರಾಣಿ ಸಂವಾದವನ್ನು ನಿರ್ವಹಿಸಿದರು. ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನರಹಳ್ಳಿ ಅವರ ಆಯ್ದ ಪುಸ್ತಕಗಳನ್ನು ಅಧ್ಯಯನ ಮಾಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಆಳ್ವಾಸ್ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.

ಬೆಂಗಳೂರಿನ ಅಭಿನವ ಪ್ರಕಾಶನದ ನ. ರವಿಕುಮಾರ್ ವಂದಿಸಿದರು. ವಿದ್ಯಾರ್ಥಿನಿಯರಾದ ಸೌಮ್ಯ ಕುಂದರ್ ಹಾಗೂ ಅನೀಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಲೇಖಕಿ ರಜನಿ ನರಹಳ್ಳಿ ಹಾಗೂ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಖಿಲ ಭಾರತ ಅಂತರ್ ವಿ ವಿ ದೇಹದಾರ್ಢ್ಯ ಸ್ಪರ್ಧೆ: ಮಂಗಳೂರು ವಿ.ವಿ ಚಾಂಪಿಯನ್

ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿಗೆ ಚಿನ್ನದ ಪದಕ ಹಾಗೂ ಪ್ರಥಮ್ ಪೂಜಾರಿಗೆ...

ಕೆರೆಬೈಲ್ ಗೆಳೆಯರ ಬಳಗದಿಂದ ಸೌಹಾರ್ದ ಇಫ್ತಾರ್ ಸಂಗಮ

ಉಳ್ಳಾಲ‌: ಬಂಗಲೆ, ಶ್ರೀಮಂತಿಕೆ ಅಥವಾ ಸ್ಥಾನಮಾನವು ಊರಿನ ಗೌರವವಲ್ಲ, ಪರಸ್ಪರ ಒಗ್ಗಟ್ಟೇ...

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

ಉಳ್ಳಾಲ: ಹಿಂದೆ ಅಡುಗೆ ಕೋಣೆಗೆ ಸೀಮಿತವಾಗಿದ್ದ ಮಹಿಳೆಯರು ಪ್ರಸ್ತುತ ಅಂತರೀಕ್ಷಕ್ಕೆ ಏರುವ...

ಮಂಗಳೂರು ವಿವಿಯಲ್ಲಿ ಸಾಧಕರಿಗೆ ಯಕ್ಷಮಂಗಳ ಪ್ರಶಸ್ತಿ

ಪ್ರದಾನ ಕಪ್ಪೆಕೆರೆ,‌ ಮಾಂಬಾಡಿ, ಜಬ್ಬಾರ್ ಸಮೊಗೆ ಯಕ್ಷಮಂಗಳ ಪ್ರಶಸ್ತಿ, 'ಬಲಿಪ ಮಾರ್ಗ'...