ಮೂಡಬಿದಿರೆ ಮಹಿಳೆಯ ಸಂಶಯಾಸ್ಪದ ಸಾವು…?

Date:

ಮೂಡುಬಿದಿರೆ: ತಲೆಗೆ ಏಟು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೋವ೯ರು ಮಂಗವಾರ ರಾತ್ರಿ ಮೃತಪಟ್ಟಿದ್ದು ಇದು ಸಂಶಯಾಸ್ಪದ ಸಾವು ಎಂದು ಸಂಬಂಧಿಕರು ಮಾತನಾಡಿಕೊಳ್ಳುತ್ತಿದ್ದಾರೆ. ವಿದ್ಯಾಗಿರಿಯ ನಿವಾಸಿ ದಿನೇಶ್ ಎಂಬವರ ಪತ್ನಿ ಕವಿತಾ ಮೃತಪಟ್ಟ ಮಹಿಳೆ ಕವಿತಾ ಅವರು ಎರಡು ದಿನಗಳ ಹಿಂದೆ ತಲೆಗೆ ಏಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು.

ಆಕೆಯ ಗಂಡ ದಿನೇಶ್ ಪ್ರತಿದಿನ ಆಕೆಗೆ ದೈಹಿಕವಾಗಿ ಹಲ್ಲೆ ನಡೆಸುತ್ತಿದ್ದ ಇದೀಗ ಕೂಡಾ ಈ ಸ್ಥಿತಿಗೆ ಆತನೇ ಕಾರಣ ಎಂದು ಆರೋಪಿಸಿ ಮಹಿಳೆಯ ಸಂಬಂಧಿಕರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಆಕೆಯ ಗಂಡ ಮತ್ತು ಇಬ್ಬರು ಹೆಣ್ಣು ಮಕ್ಕಳು ಬಿದ್ದು ಗಂಭೀರ ಗಾಯಗೊಂಡಿದ್ದರು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ದಿನೇಶ್ ಅವರು ಲ್ಯಾಂಡ್ ವ್ಯವಹಾರ ನಡೆಸುತ್ತಿದ್ದಾರೆ. ಕವಿತಾ ಅವರ ತಾಯಿ ಕೂಡಾ ಇವರ ಜತೆಯಲ್ಲೇ ಇದ್ದು ಎರಡು ವಷ೯ಗಳ ಹಿಂದೆ ಮೃತಪಟ್ಟಿದ್ದರು.

ಒಟ್ಟಾರೆಯಾಗಿ ಈ ಸಾವಿನ ಬಗ್ಗೆ ಕವಿತಾ ಅವರ ಸಂಬಂಧಿಕರು ಮತ್ತು ಮನೆಯ ಸಮೀಪದವರು ಸಂಶಯ ವ್ಯಕ್ತ ಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ಮೂಡುಬಿದಿರೆ: ಕರಾವಳಿ ಹಾಗೂ ಮಲೆನಾಡಿನ...

ರಂಗ ಸ್ವರೂಪ (ರಿ.) ಕುಂಜತ್ತಬೈಲ್ ವತಿಯಿಂದ ಬೇಸಿಗೆ ಶಿಬಿರ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ

ಕಾವೂರು: ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಆಯೋಜಿಸಿದ ರಂಗೋತ್ಸವ 2026' 4ದಿನಗಳ...

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...