ಮಾರ್ಚ್ 28ರಂದು ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ

Date:


ಕಾಸರಗೋಡು: ಮಕ್ಕಳ ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಮಕ್ಕಳ ಸಾಹಿತಿಗಳು,ಕವಿ, ಕವಯತ್ರಿಯರು, ಬರಹಗಾರರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಇದರ ಕೇರಳ ರಾಜ್ಯ ಘಟಕವಾಗಿ 2019 ರಲ್ಲಿ ಶಿವರಾಮ ಕಾಸರಗೋಡು ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕವು ರಚನಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ, ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿ ಮತ್ತು ಕನ್ನಡಪರ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಂಡಿರುತ್ತದೆ.


ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಇದರ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕನ್ನಡ ಗ್ರಾಮ, ಕಾಸರಗೋಡು ಇದರ ಸಹಯೋಗದಲ್ಲಿ ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದಲ್ಲಿ ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದ ಕಾಸರಗೋಡು ಗೋ – ಕುಟೀರದಲ್ಲಿ 2026 ಮಾರ್ಚ್ 28 ಶನಿವಾರದಂದು ಅಪರಾಹ್ನ ಗಂಟೆ 3.30 ಕ್ಕೆ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.


ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ, ಕಿರಿಯ ಮಕ್ಕಳ ಸಾಹಿತಿಗಳು,ಕವಿ, ಕವಯತ್ರಿಯರು ಹಾಗೂ 1ನೇ ತರಗತಿಯಿಂದ 10 ನೇ ತರಗತಿಯ ವಿದ್ಯಾರ್ಥಿ ಕವಿಗಳು, ಕಾಲೇಜ್ ವಿದ್ಯಾರ್ಥಿ ಕವಿಗಳು ತಮ್ಮ ಹೆಸರು, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ವಾಟ್ಸ್ ಪ್ ಮೂಲಕ ಕಳುಹಿಸಬೇಕು. ಮಕ್ಕಳ ಕವನಗಳನ್ನು ವಾಚಿಸಲು ಅವಕಾಶ ನೀಡಲಾಗಿದೆ. ಭಾಗವಹಿಸಿದ ಕವಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು.


ಶಿವರಾಮ ಕಾಸರಗೋಡು, ಅಧ್ಯಕ್ಷರು,ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕನ್ನಡ ಗ್ರಾಮ, ಗ್ರಾಮರಸ್ತೆ, ಕಾಸರಗೋಡು-671121
ಮೊಬೈಲ್ :-9448572016 ಇವರನ್ನು ಸಂಪರ್ಕಿಸಬಹುದು.

ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ – ಕುಟೀರ”ದಲ್ಲಿ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ ಮತ್ತು ಮಕ್ಕಳ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೇಖಕಿ ರೆಶೆಲ್ ಫೆರ್ನಾಂಡಿಸ್ ಅವರಿಗೆ ದಿವಾ ಪ್ಲಾನೆಟ್ ವತಿಯಿಂದ ಟಾಪ್ 50 ಗಮನಾರ್ಹ ಮಹಿಳಾ ಗೌರವ

ರೆಶೆಲ್ ಬ್ರೆಟ್ನಿ ಫೆರ್ನಾಂಡಿಸ್ ಪ್ರಮುಖ ಯುವ ಲೇಖಕಿ ಮತ್ತು ವಾಗ್ಮಿ, ಎಬಿವಿಪಿ...

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ಮೂಡುಬಿದಿರೆ: ಕರಾವಳಿ ಹಾಗೂ ಮಲೆನಾಡಿನ...

ರಂಗ ಸ್ವರೂಪ (ರಿ.) ಕುಂಜತ್ತಬೈಲ್ ವತಿಯಿಂದ ಬೇಸಿಗೆ ಶಿಬಿರ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ

ಕಾವೂರು: ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಆಯೋಜಿಸಿದ ರಂಗೋತ್ಸವ 2026' 4ದಿನಗಳ...

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...