ಅಕ್ರಮ ಕೋಳಿ ಅಂಕಕ್ಕೆ ಪೊಲೀಸರಿಂದ ದಾಳಿ: 6 ಜನರ ಬಂಧನ

Date:

ಮೂಡಬಿದಿರೆ: ಮೂಡಬಿದರೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ರಾಜೇಂದ್ರ ಪೂಜಾರಿ ಹಾಗೂ ರಾಜೇಶ್ ಬಲ್ಲಾಳ್ ರವರ ನೇತೃತ್ವದಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕದ ಅಡ್ಡೆಗೆ ದಾಳಿ ನಡೆಸಿ 6 ಜನರನ್ನು ಬಂಧಿಸಿದ್ದು 17 ಜೀವಾಂತ ಹುಂಜಗಳನ್ನು ಪಣಕ್ಕಿಟ್ಟಿದ್ದ 1480 ರೂ ಹಣವನ್ನು, ವಶಕ್ಕೆ ಪಡೆದುಕೊಂಡಿದ್ದಾರೆ.

ಶ್ರೀ ಕೋಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆಯು ಮುಗಿದ ಬಳಿಕ ಬುಧವಾರ ಅಕ್ರಮವಾಗಿ ಕೋಳಿ ಅಂಕವನ್ನು ಆಯೋಜಿಸಿದ್ದು ಬಳಸುವ ಎರಡು ಬಾಲುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ದೈವಸ್ದಾನದ ವ್ಯವಸ್ದಾಪನಾ ಸಮಿತಿ ಹಾಗೂ ಅರೋಪಿಗಳ ಮೇಲೆ ಮೂಡಬಿದ್ರೆ ಪೊಲೀಸ್ ಠಾಣಾ ಅ ಕ್ರ 30/2026 ಕಲಂ 189(2), 193 ಜೊತೆಗೆ 190 ಬಿ ಎನ್ ಎಸ್ ಮತ್ತು 87, 93 ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 11(1)(ಟಿ) ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆ 1960 ರಂತೆ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...