ಕೊಣಾಜೆ: ದೇವರಾಜ ಅರಸು ಮೆಟ್ರಿಕ್ ನಂತರದ ಸ್ನಾತಕೋತ್ತರ ವಿದ್ಯಾರ್ಥಿ ನಿಲಯದ ರಜತ ಸಂಭ್ರಮ

Date:

ಉಳ್ಳಾಲ: ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲ್ಪಡುವ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಸ್ನಾತಕೋತ್ತರ ವಿದ್ಯಾರ್ಥಿ ನಿಲಯದ ರಜತ ಸಂಭ್ರಮದ ಹಾಸ್ಟೆಲ್ ಡೇ ಅನರ್ಘ್ಯ- 2026 ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು.


ಚಿತ್ರನಟ, ಹಿರಿಯ ರಂಗಭೂಮಿ ಕಲಾವಿದ ಅರವಿಂದ ಬೋಳಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬೇರೆ ಬೇರೆ ಮನೆಯಿಂದ ಬಂದರೂ ಇಲ್ಲಿ ಒಂದೇ ಕುಟುಂಬದ ಸದಸ್ಯರಂತೆ ವಿದ್ಯಾರ್ಥಿಗಳು ಜೊತೆಯಾಗಿರುವುದು ವಿಶೇಷವಾದ ಅನುಭವವನ್ನು ನೀಡುತ್ತದೆ , ವಿದ್ಯಾ ಸಂಸ್ಥೆಗಳು ದೇವಸ್ಥಾನದಂತೆ ಶ್ರೇಷ್ಟ ಎಂದರು.


ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಬಿಂದಿಯಾ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಶ್ರದ್ಧೆಯಿಂದ ಕೆಲಸ ಮಾಡಿದಾಗ ಯಶಸ್ಸು ಸಾಧಿಸಲು ಸಾಧ್ಯವಿದೆ. ಏನನ್ನು ಯೋಚಿಸುತ್ತೇವೆಯೋ ಅದೇ ಆಗುತ್ತೇವೆ, ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪ್ರಯತ್ನ ಇರಲಿ ಎಂದು ಆಶಿಸಿದರು.
ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಮಾಧವ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ‌ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಜೀವನ ನಡೆಸಿ ನಮ್ಮ ಗುರಿಯನ್ನು ಸಾಧಿಸ ಬೇಕೆಂದರು.


ಈ ಸಂದರ್ಭ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ನಿಲಯ ಪಾಲಕಿ ಭವಾನಿ ಹಾಗೂ ಅಡುಗೆ ಸಿಬ್ಬಂದಿಗಳನ್ನು ಗೌರವಿಸಲಾಯಿತು. ರಜತ ಸಂಭ್ರಮದ‌ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಿಲಯದ ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತ ಪಡಿಸಿದರು.

ಅಸೈಗೋಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ನಾಗರಾಜ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಂಗಳೂರು ತಾಲೂಕು ವಿಸ್ತರಣಾಧಿಕಾರಿ ಸಂಗಮೇಶ್, ಮಂಗಳೂರು ಹಾಪ್ ಕಾಮ್ಸ್ ನಿರ್ದೇಶಕ ರವಿ ಕುಮಾರ್ ಶೆಟ್ಟಿ, ರಾಯಿ ಶಾಲೆಯ ಶಿಕ್ಷಕ ಸಿದ್ದಪ್ಪ ದೊಡ್ಡ ಕರಿಯಪ್ಪ, ಕೊಣಾಜೆ ಗ್ರಾಮ‌ ಪಂಚಾಯತಿ ಮಾಜಿ ಅಧ್ಯಕ್ಷೆ ಗೀತಾ ಕುಂದರ್, ಕೊಣಾಜೆ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯದ ನಿಲಯ ಪಾಲಕಿ ಲಸ್ಸೀನಾ, ಪ್ರಮುಖರಾದ ಜಯಾನಂದ‌ ಶೆಟ್ಟಿ ಕೊಣಾಜೆ, ವಿವಿಧ ವಿದ್ಯಾರ್ಥಿ ನಿಲಯದ ನಿಲಯ ಪಾಲಕರಾದ ಕೃಷ್ಣರಾಜ್, ರಾಧೇಶ್ ತೊರ್ಕೆ, ಪುಷ್ಪಲತಾ, ಶಶಿಕಲಾ ಶೆಟ್ಟಿ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.


ನಿಲಯ ಪಾಲಕಿ ಭವಾನಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. 25 ವರ್ಷಗಳ ಅವಧಿಯಲ್ಲಿ ನಿಲಯ ಬೆಳೆದು ಬಂದ ಹಾದಿಯನ್ನು ತಿಳಿಸಿದರು. ವಿದ್ಯಾರ್ಥಿನಿರಾದ
ಮೋಕ್ಷ ವಂದಿಸಿ, ಭೂಮಿಕಾ ಕಾರ್ಯಕ್ರಮ ನಿರೂಪಿಸಿದರು. ಬಳಿಕ ನಿಲಯದ ವಿದ್ಯಾರ್ಥಿಗಳಿಂದ‌ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...