ನಿವೃತ್ತಿ ಹೊಂದಿದ ಮೂಡಬಿದಿರೆ ಇಓ ಅವರಿಗೆ ಬೀಳ್ಕೊಡುಗೆ, ಸನ್ಮಾನ

Date:

ಮೂಡಬಿದಿರೆ: 37ವರ್ಷಗಳ ಕಾಲ ಸರಕಾರಿ ಉದ್ಯೋಗದಲ್ಲಿ ಸೇವೆ ಸಲ್ಲಿಸಿ ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯಾಗಿ ನಿವೃತಿ ಹೊಂದಿರುವ ಕುಸುಮಾಧರ ಬಿ. ಅವರಿಗೆ ಬೀಳ್ಕೊಡುಗೆ ಸಮಾರಂಭ ಕನ್ನಡ ಭವನದಲ್ಲಿ ಮಂಗಳವಾರ ನಡೆಯಿತು.


ಅವರನ್ನು ಪತ್ನಿ ಸ್ನೇಹಲತಾ ಸಮೇತರಾಗಿ ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಬೆಳ್ಳಿಯ ಛಾಯಾಚಿತ್ರದೊಂದಿಗೆ ಚಿನ್ನದ ಉಂಗುರ ಸಹಿತ ಸನ್ಮಾನ ಪತ್ರ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಪಶುಸಂಗೋಪನ ಇಲಾಖೆ ಉಪನಿರ್ದೇಶಕ ಹಾಗೂ ಆಡಳಿತ ಅಧಿಕಾರಿ ಅರುಣ್ ಶೆಟ್ಟಿ ಅವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ ಕುಸುಮಾಧರ ಅವರು ಸರಕಾರಿ ಇಲಾಖೆಯಲ್ಲಿ ಜನಪರವಾಗಿ ತಾಳ್ಮೆಯ ಕಾರ್ಯನಿರ್ವಹಣೆ ಯಿಂದಾಗಿ ಪ್ರೀತಿ ಪಾತ್ರರಾಗಿದ್ದಾರೆ ಎಂದರು.

ದ.ಕ. ಹಾಲು ಉತ್ಪಾದಕರ ಒಕ್ಕೂಟದ ನಿದೇ೯ಶಕ ಕೆ. ಪಿ. ಸುಚರಿತ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕುಸುಮಾಧರ ಅವರು ಹೂ ಮನಸ್ಸಿನವರು. ಕಾನೂನು ಮತ್ತು ಒತ್ತಡಗಳ ಮಧ್ಯೆ ಜನರಿಗೆ ಸಹಾಯವಾಗುವಂತೆ ಪಾರದಶ೯ಕವಾಗಿ ಆಡಳಿತ ನಡೆಸಿದವರು ಎಂದರು.
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜಯಲಕ್ಷ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಜಿಪಂ ಲೆಕ್ಕಾಧಿಕಾರಿ ಶಕುಂತಲಾ ಶೆಣೈ, ಮೂಡುಬಿದಿರೆ ತಾಲೂಕು ಪಂಚಾಯತ್ ನೂತನ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ಏಇಇ ಶಿವಣ್ಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಪ್ರಥಮ ದರ್ಜೆ ಗುತ್ತಿಗೆದಾರರಾದ ನಟರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಅವರು ಕುಸುಮಾಧರ ಅವರ ಕಾರ್ಯ ವೈಖರಿಯನ್ನು ತಿಳಿಸಿದರು. ಜಿಲ್ಲೆಯ ಬೇರೆ ಬೇರೆ ತಾಲೂಕುಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು ಜನಪ್ರತಿನಿಧಿಗಳು ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಕುಸುಮಾಧರ ಅವರನ್ನು ಗೌರವಾರ್ಪಿಸಿದರು.


ಸಹಾಯಕ ನಿರ್ದೇಶಕರಾದ ಸಾಯಿಶ್ ಚೌಟ ಸ್ವಾಗತಿಸಿದರು. ಅಶ್ವಿನಿ, ಅನ್ವಯ, ಪ್ರಜ್ಞಾ ಪ್ರಾರ್ಥನೆಗೈದರು. ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಸಿದರು. ಬೆಳುವಾಯಿ ಪಂ ಅಭಿವೃದ್ಧಿ ಅಧಿಕಾರಿ ಸವಿತಾ ಸನ್ಮಾನ ಪತ್ರ ವಾಚಿಸಿದರು. ಶಿರ್ತಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...