ಕನ್ನಡದ ಸಾಮರಸ್ಯದ ನೆಲೆಗಳು: ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ – ಮಂಗಳೂರಿನಲ್ಲಿ ಪೂರ್ವ ಸಿದ್ಧತಾ ಸಭೆ

Date:

ಮಂಗಳೂರು: ದಿನಾಂಕ 13/04/2026 ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ “ಕನ್ನಡದ ಸಾಮರಸ್ಯದ ನೆಲೆಗಳು” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾಗುತ್ತಿರುವ ಮಹತ್ವದ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಭವ್ಯವಾಗಿ ನಡೆಯಲಿದೆ. ಈ ಪುಸ್ತಕಗಳು ಕರ್ನಾಟಕದ ಸಾಮರಸ್ಯ ಸಂಸ್ಕೃತಿ, ಬಹುಮುಖ ಪರಂಪರೆ ಹಾಗೂ ವೈವಿಧ್ಯತೆಯೊಳಗಿನ ಏಕತೆಯನ್ನು ಪ್ರತಿಬಿಂಬಿಸುವ ಅಮೂಲ್ಯ ಕೃತಿಗಳಾಗಿವೆ.

ಈ ಮಹತ್ವದ ಕಾರ್ಯಕ್ರಮದ ಸಿದ್ಧತೆಗಳ ಅಂಗವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯು ಪ್ರಾಧಿಕಾರದ ಅಧ್ಯಕ್ಷರಾದ ಡಾ‌. ಪುರುಷೋತ್ತಮ ಬಿಳಿಮಲೆ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಸದಸ್ಯರೊಂದಿಗೆ ಭಾಗವಹಿಸಿ, ಕಾರ್ಯಕ್ರಮದ ರೂಪುರೇಷೆಗಳು, ಪುಸ್ತಕಗಳ ಮಹತ್ವ ಹಾಗೂ ಜನಸಾಮಾನ್ಯರಿಗೆ ತಲುಪಿಸುವ ವಿಧಾನಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.

ಈ ಸಂಧರ್ಭದಲ್ಲಿ ಸಮಿತಿ ಸದಸ್ಯರಾದ ಡಾ. ರಾಜೇಶ್ ಕದ್ರಿ, ದಿವಾಕರ ದಾಸ್ ಕಾವಲಕಟ್ಟೆ, ದೇವಿಪ್ರಸಾದ್ ಬೆಳ್ತಂಗಡಿ, ಹಸೈನಾರ್ ತಾಳಿತ್ತನೂಜಿ ಕೊಳ್ನಾಡು, ರೆಹಮಾನ್ ಖಾನ್ ಕುಂಜತ್ತಬೈಲ್, ಯು.ಎಚ್.ಖಾಲಿದ್ ಉಜಿರೆ, ಶ್ರೀಮತಿ ಸುಜಾತ ದೀಪಕ್, ಶ್ರೀಮತಿ ಶಾಂತ ಎಸ್.ರಾವ್ ಉಪಸ್ಥಿತರಿದ್ದರು. ಕನ್ನಡ ಸಂಸ್ಕೃತಿ ಇಲಾಖೆಯ ರಾಜೇಶ್ ಸ್ವಾಗತಿಸಿ, ದಿವಾಕರ ದಾಸ್ ಧನ್ಯವಾದ ತಿಳಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...