ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು: ಡಿಐಜಿಪಿ ಜಿನೇಂದ್ರ ಖನಗಾವಿ

Date:

ಮೂಡುಬಿದಿರೆ: ಭಾರತದ ಬಲಿಷ್ಠ ಕಂಬಗಳು ವಿದ್ಯಾಥಿ೯ಗಳು. ನಿಮ್ಮ ಜೀವನದಲ್ಲಿ ಅನೇಕ ಅವಕಾಶಗಳು ಸಿಗುತ್ತವೆ. ಅವುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್ ಜಿನೇಂದ್ರ ಖನಗಾವಿ ಹೇಳಿದರು.

ಅವರು ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರೇರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಜೀವನದಲ್ಲಿ ತಪ್ಪುಗಳಾಗುವುದು ಸಹಜ ಆದರೆ ಆ ತಪ್ಪುಗಳನ್ನು ತಿದ್ದಿಕೊಂಡು ಜೀವನದಲ್ಲಿ ಮುನ್ನಡೆಯಬೇಕು. ಮಾನಸಿಕ ಒತ್ತಡವನ್ನು ನಿಭಾಯಿಸಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಗುರಿಯಲ್ಲಿ ಸ್ಪಷ್ಟತೆ ಇದ್ದರೆ ಮಾತ್ರ ಗುರಿ ಮುಟ್ಟಲು ಸಾಧ್ಯ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನೀವು ಅತ್ಯಂತ ಉತ್ತಮ ಜ್ಞಾನವಂತರಾಗಿರಬೇಕು. ಸಾಮಾಜಿಕ ಪ್ರಜ್ಞೆ ಹೊಂದಿರಬೇಕು ಎಂದರು.

ನಂತರ ವಿದ್ಯಾರ್ಥಿಗಳ ಜೊತೆಯಲ್ಲಿ ಸಂವಾದ ಚರ್ಚೆಯಲ್ಲಿ ಪಾಲ್ಗೊಂಡರು. ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿ ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...