ಮಂಗಳೂರು ಲಾಠಿ ಚಾರ್ಜ್ ಪ್ರಕರಣದ 101 ಆರೋಪಿಗಳಿಗೆ ಖುಲಾಸೆ

Date:

ನ್ಯಾಯಾಲಯದಿಂದ ಸಂಪೂರ್ಣ ಬಿಡುಗಡೆ

ಮಂಗಳೂರು: 2017 ರ ಏಪ್ರಿಲ್ 4ರಂದು ಮಂಗಳೂರಿನ ಕಮಿಷನರ್ ಕಛೇರಿ ಮುಂಭಾಗದಲ್ಲಿ ನಡೆದ ಲಾಠಿ ಚಾರ್ಜ್ ಸಂಬಂಧಿಸಿದಂತೆ ದಾಖಲಾದ ಪ್ರಕರಣಕ್ಕೆ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದ್ದು, ಒಟ್ಟು 101 ಆರೋಪಿಗಳನ್ನು ಸಂಪೂರ್ಣವಾಗಿ ಬಿಡುಗಡೆಗೊಳಿಸಿದೆ.

ಜಿಲ್ಲೆಯಲ್ಲಿ ನಡೆದ ಕೊಲೆಯೊಂದಕ್ಕೆ ಪೊಲೀಸರು ಅಮಾಯಕ ಅಹ್ಮದ್ ಖುರೇಶಿ ಎಂಬಾತನನ್ನು ಅಕ್ರಮವಾಗಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸದೇ ದೌರ್ಜನ್ಯ ನಡೆಸಿ ಹಲ್ಲೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಕೆಲ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ಮುಂದಾದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

ಈ ಸಂದರ್ಭದಲ್ಲಿ ಕಲ್ಲುತೂರಾಟ ನಡೆದಿದೆ ಎಂಬ ಆರೋಪದಲ್ಲಿ ಹಲವರ ಮೇಲೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ, ಒಟ್ಟು 101 ಮಂದಿಯ ವಿರುದ್ಧ ಅಂತಿಮ ವರದಿ ಸಲ್ಲಿಸಲಾಗಿತ್ತು. ಇವುಗಳಲ್ಲಿ ಎರಡು ಪ್ರಕರಣಗಳು ಎರಡನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಮತ್ತು ಮತ್ತೊಂದು ಗಂಭೀರ ಪ್ರಕರಣ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಿದ್ದವು.

ವಿಚಾರಣೆ ವೇಳೆ, ಆರೋಪಗಳನ್ನು ಸಾಬೀತುಪಡಿಸಲು ಅಭಿಯೋಜಕ ಪಕ್ಷ ಸಂಪೂರ್ಣ ವಿಫಲವಾಗಿದೆ ಎಂದು ನ್ಯಾಯಾಲಯಗಳು ಅಭಿಪ್ರಾಯಪಟ್ಟಿದ್ದು, ಈ ಎಲ್ಲಾ ಪ್ರಕರಣಗಳಲ್ಲೂ ಆರೋಪಿಗಳಿಗೆ ಬಿಡುಗಡೆ ನೀಡಲಾಗಿದೆ. ಇದು 9 ವರ್ಷಗಳ ಕಾನೂನು ಹೋರಾಟಕ್ಕೆ ಸಂದ ನ್ಯಾಯದ ಗೆಲುವಾಗಿ ಪರಿಗಣಿಸಲಾಗುತ್ತಿದೆ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ಮಂಗಳೂರಿನ ಲೆಕ್ಸ್ ಜೂರಿಸ್ ವಕೀಲರಾದ ಆಸಿಫ್ ಬೈಕಾಡಿ, ಮುಫೀದಾ ರಹ್ಮಾನ್, ಇರ್ಷಾದ್ ಸಖಾಫಿ ಮೊಂಟೆಪದವು, ಅಯಾಝ್ ಚಾರ್ಮಾಡಿ, ಮಹಮ್ಮದ್ ಆದಿಲ್, ನಿಶಾನ್ ಎಂ.ಕೆ, ರುಬೀನ, ಅಂಸೀನ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...