
ತಲಪಾಡಿ: ಹೆದ್ದಾರಿಯಲ್ಲಿ ಇಂದು ಕೆಎಸ್ಸಾರ್ಟಿಸಿ ಬಸ್ಸು ಡಿಕ್ಕಿ ಹೊಡೆದು ಓರ್ವ ಬಾಲಕಿ ಸಹಿತ ನಾಲ್ವರು ಮಹಿಳೆಯರು ಹಾಗೂ ರಿಕ್ಷಾ ಚಾಲಕ ಹೈದರ್ ಅಲಿ ಮೃತಪಟ್ಟು ಕೆಲವರು ಗಾಯಗೊಂಡ ಘಟನೆ ಸಂಭವಿಸಿದ್ದು,ಆಸ್ಪತ್ರೆಗೆ ಭೇಟಿ ನೀಡಿದ ಸಭಾಧ್ಯಕ್ಷ ಯು.ಟಿ.ಖಾದರ್ ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.ಈ ಬಗ್ಗೆ ಆಸ್ಪತ್ರೆಯೆ ವೈದ್ಯರೊಂದಿಗೆ ಮಾತುಕತೆ ನಡೆಸಿ ಆದಷ್ಟು ಬೇಗನೇ ಪೋಸ್ಟ್ ಮಾರ್ಟಂ ಹಾಗೂ ಇತರ ಕಾರ್ಯಗಳನ್ನು ಪೂರೈಸಿ ಸಂಬಂಧಪಟ್ಟ ಕುಟುಂಬದವರಿಗೆ ಮೃತದೇಹ ಗಳನ್ನು ಹಸ್ತಾಂತರಿಸುವ ಕುರಿತು ಸೂಚನೆ ನೀಡಿದ್ದಾರೆ.
ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ರವರೊಂದಿಗೂ ದೂರವಾಣಿ ಮೂಲಕ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಘಟನೆಯ ಬಗ್ಗೆ ಕೂಲಂಕುಷ ತನಿಖೆ ನಡೆಸುವಂತೆ ಸೂಚನೆ ನೀಡಿ ಹಾಗೂ ಮೃತರ ಕುಟುಂಬಕ್ಕೆ ಕೆಎಸ್ಸಾರ್ಟಿಸಿ ವತಿಯಿಂದ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.