ಕನ್ಯಾನ ಬೆರಿಕಟ್ಟೆ ಪರಿಸರದಲ್ಲಿ ಕೋಳಿ ಫಾರ್ಮ್ ದುರ್ವಾಸನೆಗೆ ಸಾರ್ವಜನಿಕರ ಆಕ್ರೋಶ – ಪಂಚಾಯತ್ ನಿರ್ಲಕ್ಷ್ಯ ಆರೋಪ

Date:

ವಿಟ್ಲ: ಬಂಟ್ವಾಳ ತಾಲೂಕಿನ ಕನ್ಯಾನ ಬೆರಿಕಟ್ಟೆ – ಕಾಡುಮನೆ ಪರಿಸರದ ನಿವಾಸಿಗಳು ಹಲವು ವರ್ಷಗಳಿಂದ ಸಾರ್ವಜನಿಕ ಆರೋಗ್ಯಕ್ಕೆ ಮಾರಕವಾಗಿರುವ ಸಮಸ್ಯೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆರಿಕಟ್ಟೆ ಮಸೀದಿಯ ಸಮೀಪದಲ್ಲಿರುವ ಮೂಸ ಶಹೀದ್ ರವರ ಮಾಲಕತ್ವದ ಕೋಳಿ ಫಾರ್ಮ್‌ನಿಂದ ಹರಡುತ್ತಿರುವ ತೀವ್ರ ದುರ್ವಾಸನೆ, ಸೊಳ್ಳೆ ಹಾಗೂ ನೋಣಗಳ ಕಾಟದಿಂದ ಸ್ಥಳೀಯರು ಸಂಕಷ್ಟದ ಬದುಕು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಫಾರ್ಮ್‌ನಿಂದ ನಿರಂತರವಾಗಿ ಹರಡುವ ದುರ್ವಾಸನೆಯಿಂದ ಸುತ್ತಮುತ್ತಲಿನ ಮನೆಗಳಲ್ಲಿ ವಾಸಿಸುವುದೇ ಅಸಹನೀಯ ಸ್ಥಿತಿಗೆ ತಲುಪಿದ್ದು, ವಿಶೇಷವಾಗಿ ಫಾರ್ಮ್‌ನ ಕೆಳಭಾಗದಲ್ಲಿರುವ ಕುಟುಂಬಗಳು ದಿನನಿತ್ಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಮಕ್ಕಳಲ್ಲಿ ಅಲರ್ಜಿ, ಉಸಿರಾಟದ ತೊಂದರೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದು, ಪರಿಸರ ಸಂಪೂರ್ಣ ಅಸ್ವಚ್ಛಗೊಂಡಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ಕೋಳಿ ಫಾರ್ಮ್ ಪ್ರದೇಶವು ಸೊಳ್ಳೆ, ನೋಣ ಹಾಗೂ ಕೀಟಗಳ ಉತ್ಪತ್ತಿ ಕೇಂದ್ರವಾಗಿದ್ದು, ಆಹಾರ ಪದಾರ್ಥಗಳ ಮೇಲೆಯೂ ನೋಣಗಳು ಕುಳಿತುಕೊಳ್ಳುತ್ತಿರುವ ಕಾರಣ ಸೋಂಕು ರೋಗಗಳು ಹರಡುವ ಭೀತಿ ಹೆಚ್ಚಾಗಿದೆ. ಈ ಕುರಿತು ಸುಮಾರು ಎರಡು ವರ್ಷಗಳ ಹಿಂದೆಯೇ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಶಾಶ್ವತ ಪರಿಹಾರ ಅಥವಾ ಕಾನೂನು ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಸಾರ್ವಜನಿಕರ ಆರೋಗ್ಯ ಮತ್ತು ಪರಿಸರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಸದರಿ ಕೋಳಿ ಫಾರ್ಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸಮಸ್ಯೆಗೆ ಶೀಘ್ರ ಪರಿಹಾರ ಸಿಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...