ಮೂಡಬಿದಿರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಗಿಯದ ಗೋಳು: ಬೆಳುವಾಯಿಯಲ್ಲಿ ಮತ್ತೆ ಆಕ್ಸಿಡೆಂಟ್

Date:

ಮೂಡಬಿದಿರೆ : ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್ ಬಳಿ ಗುರುವಾರದಂದು ಬಸ್ ಹಾಗೂ ಕಾರಿನ ಮಧ್ಯೆ ಅಫಘಾತ ಸಂಭವಿಸಿದೆ. ಕಳೆದ ಕೆಲವು ತಿಂಗಳಿನಿಂದ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಆಕ್ಸಿಡೆಂಟ್ ಗಳಲ್ಲಿ ಇದೂ ಒಂದಾಗುವ ಮೂಲಕ ಇಲ್ಲಿ ಅಪಘಾತದದ್ದೇ ಗೋಳಾಗಿದೆ.

ಬನ್ನಡ್ಕದಿಂದ ಕಾಂತಾವರ ಕ್ರಾಸ್ ನವರೆಗೆ ಡಿವೈಡರ್ ಮಧ್ಯೆ ವಾಹನಗಳು ಸಂಚರಿಸಲು ಬಿಟ್ಟಿದ್ದ ದಾರಿಯನ್ನು ಬುಧವಾರದಿಂದ ಬಂದ್ ಮಾಡಲಾಗಿದ್ದು ಈ ಬಗ್ಗೆ ವಾಹನ ಚಾಲಕರಿಗೆ ಮಾಹಿತಿಯ ಕೊರತೆಯಿರುವುದರಿಂದ ಅವ್ಯವಸ್ಥಿತ ಚಾಲನೆಯಿಂದಾಗಿ ಅಫಘಾತ ಆಗುವ ಹೆಚ್ಚಾಗುವ ಮುನ್ಸೂಚನೆ ಕಂಡು ಬಂದಿದೆ. ಕಾಂತಾವರ ಕಡೆಯಿಂದ ಬರುವ ವಾಹನಗಳು ಮೂಡುಬಿದಿರೆ ಕಡೆಗೆ ಸಾಗಬೇಕಾದರೆ ಕಾರ್ಕಳ ಕಡೆ ತಿರುಗಿ ಚಿಲಿಂಬಿ ಬಳಿ ಯು ಟರ್ನ್ ಪಡೆದು ಬೆಳುವಾಯಿ ಬಂದು ಮುಂದೆ ಸಾಗಬೇಕಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನ ನಿತ್ಯ ನಿಯಮಾವಳಿಗಳಲ್ಲಿ ಬದಲಾವಣೆ ಮಾಡುತ್ತಿರುವುದರಿಂದ, ಸಂಚಾರಕ್ಕೆ ಹೊಸ ದಾರಿ ನೀಡುತ್ತಿರುವುದರಿಂದ ವಾಹನ ಸವಾರರು ದಿಕ್ಕು ತೋಚದಂತಾಗಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...