ಜೂನ್ 3ಕ್ಕೆ ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ಫಲಿತಾಂಶ

Date:

ಮೂಡಬಿದಿರೆ: ಕಳೆದ 10 ತಿಂಗಳ ಹಿಂದೆ ನಡೆದಿದ್ದ ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ಫಲಿತಾಂಶ ಪ್ರಕಟಣೆಗೆ ನ್ಯಾಯಾಲಯವು ಮೇ.25 ರಂದು ಅನುಮತಿ ನೀಡಿದೆ. ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಗೆ 2025ರ ಜುಲೈ 10ರಂದು ಚುನಾವಣೆ ನಡೆದಿತ್ತು. ಆದರೆ ಸಂಘದ ಉಪನಿಯಮಾವಳಿ ಹಾಗೂ ಮತದಾನದ ಪ್ರಕ್ರಿಯೆಗೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ದಾಖಲಾಗಿದ್ದ ಹಿನ್ನೆಲೆಯಲ್ಲಿ ಮತ ಎಣಿಕೆ ಹಾಗೂ ಫಲಿತಾಂಶ ಘೋಷಣೆಗೆ ತಡೆ ವಿಧಿಸಲಾಗಿತ್ತು.

ಆಡಳಿತಾಧಿಕಾರಿಗಳ ಅವಧಿಯಲ್ಲೇ ಚುನಾವಣೆ ನಡೆದಿದ್ದರೂ, ಕಾನೂನು ಹೋರಾಟದ ಕಾರಣದಿಂದ ಫಲಿತಾಂಶವನ್ನು ಕಾಯ್ದಿರಿಸಲಾಗಿತ್ತು. ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ನ್ಯಾಯಾಲಯವು ನೀಡಿದ ಆದೇಶದಂತೆ, ಜೂನ್ 3ರಂದು ಮಧ್ಯಾಹ್ನ 11.30ಕ್ಕೆ ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ಅಧಿಕೃತವಾಗಿ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ನ್ಯಾಯಾಲಯದಲ್ಲಿ ದಾಖಲಾಗಿದ್ದ ದಾವೆ ಪ್ರಕರಣದ ವಿಚಾರಣೆ ಪೂರ್ಣಗೊಂಡು, ಮೇ 25ರಂದು ಅಂತಿಮ ಆದೇಶ ಹೊರಬಿದ್ದಿದ್ದು ನ್ಯಾಯಾಲಯದ ಈ ಮಹತ್ವದ ಆದೇಶದ ಹಿನ್ನೆಲೆಯಲ್ಲಿ, ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ರಿಟರ್ನಿಂಗ್ ಅಧಿಕಾರಿ ಜೂನ್ 3ರಂದು ಫಲಿತಾಂಶ ಘೋಷಣೆಗೆ ದಿನ ನಿಗದಿ ಪಡಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲಾ ಅಭ್ಯರ್ಥಿಗಳು ಅಂದು ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...