ಯುನಿವೆಫ್‌ನಿಂದ ಸ್ನೇಹ ಸಂವಾದ

Date:

ಮಂಗಳೂರು:ಯುನಿವೆಫ್ ಕರ್ನಾಟಕದ ವತಿಯಿಂದ ‘ಅಪನಂಬಿಕೆಗಳ ಮಧ್ಯೆ ಧರ್ಮಾಚರಣೆ’ ಎಂಬ ವಿಷಯದಲ್ಲಿ ಸರ್ವಧರ್ಮೀಯರೊಂದಿಗೆ ಸ್ನೇಹ ಸಂವಾದ ಕಾರ್ಯಕ್ರಮ ಬಲ್ಮಠದ ಶಾಂತಿ ನಿಲಯ ಸಭಾಂಗಣದಲ್ಲಿ ನಡೆಯಿತು.

ದ.ಕ.ಜಿಲ್ಲಾ ಧಾರ್ಮಿಕ ಪರಿಷತ್‌ನ ಸದಸ್ಯ ಲಕ್ಷ್ಮೀಶ ಗಬ್ಲಡ್ಕ‌ ವಿಷಯ‌ ಮಂಡಿಸಿ ಮಾತನಾಡಿ ಹಿಂದುತ್ವವು ರಾಜಕೀಯವಾಗುತ್ತಿದೆ. ಮುಸ್ಲಿಮರು ಮತ್ತು ಕ್ರೈಸ್ತರು ಸಮಾಜದಲ್ಲಿ ಬದುಕಲು ಅನರ್ಹರು ಎಂಬ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ. ಧಾರ್ಮಿಕತೆಯನ್ನು ಮೈಗೂಡಿಸಿಕೊಳ್ಳುವ ಯುವ ಸಮೂಹದಲ್ಲಿ ಅಸಹಿಷ್ಣುತೆಯೂ ಹೆಚ್ಚುತ್ತಿವೆ. ಇದು ಪರಸ್ಪರ ಅಪನಂಬಿಕೆಗೆ ಕಾರಣವಾಗುತ್ತಿದೆ. ಇದರಿಂದ ಅಂತರ ಹೆಚ್ಚಾಗುತ್ತಿದೆಯೇ ವಿನಃ ವಿಶ್ವಾಸ, ನಂಬಿಕೆ, ಒಗ್ಗೂಡುವಿಕೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ನಾವು ಸಾಂಸ್ಕೃತಿಕವಾಗಿ ಒಳಗೊಂಡು ಸೌಹಾರ್ದ ವಾತಾವರಣ ರೂಪಿಸಲು ಪ್ರಯತ್ನಿಸಬೇಕಿದೆ ಎಂದು ಲಕ್ಷ್ಮೀಶ ಗಬ್ಲಡ್ಕ ಹೇಳಿದರು.

ಮತ್ತೋರ್ವ ಮುಖ್ಯ ಅತಿಥಿ ಬಿಜೈ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್‌ನ ಪ್ಯಾರಿಶ್ ಪ್ರೀಸ್ಟ್ ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನಾ ಮಾತನಾಡಿ ಏಸುಕ್ರಿಸ್ತ ಕಲಿಸಿಕೊಟ್ಟ ದಾರಿಯಲ್ಲಿ ನಡೆಯುವ ಪ್ರಯತ್ನವನ್ನು ಕ್ರೈಸ್ತರು ಮಾಡುತ್ತಿದ್ದಾರೆ. ಅದುವೇ ಜೀವನದ ವಿಧಾನವಾಗಿದೆ ಎಂದು ಹೇಳಿದರು.

ಯುನಿವೆಫ್ ಕರ್ನಾಟಕ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವೇದಿಕೆಯಲ್ಲಿ ಮಂಗಳೂರಿನ ಧರ್ಮ ರಕ್ಷಣಾ ವೊಗವೀರ ವೇದಿಕೆಯ ಅಧ್ಯಕ್ಷ ನವೀನ್‌ಚಂದ್ರ ಶ್ರೀಯಾನ್, ಯುನಿವೆಫ್ ದೇರಳಕಟ್ಟೆ ಶಾಖೆಯ ಅಧ್ಯಕ್ಷ ಅಬ್ದುರ್ರಹ್ಮಾನ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಚಾಲಕ ಮುಹಮ್ಮದ್ ಸೈಫುದ್ದೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುನಿವೆಫ್ ಪ್ರಧಾನ ಕಾರ್ಯದರ್ಶಿ ಯು.ಕೆ. ಖಾಲಿದ್ ಸ್ವಾಗತಿಸಿದರು. ಜುನೈದ್ ಕಿರಾಅತ್ ಪಠಿಸಿದರು. ಮುಹಮ್ಮದ್ ಹುದೈಫ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...