ಮಂಗಳೂರಿನಲ್ಲಿ ‘ಸಿಮುಕೇರ್ 2026’ ಕ್ಲಿನಿಕಲ್ ಕೌಶಲ್ಯ ಕಾರ್ಯಾಗಾರ ಉದ್ಘಾಟನೆ

Date:

ಮಂಗಳೂರು: ನಗರದ ಶಕ್ತಿನಗರದ ಸಿಟಿ ಕಾಲೇಜ್ ಆಫ್ ನರ್ಸಿಂಗ್ ಹಾಗೂ ಫೇಮ್ ಅಕಾಡೆಮಿ ಜಂಟಿ ಆಶ್ರಯದಲ್ಲಿ ‘ಸಿಮುಕೇರ್ 2026’ ಸಿಮ್ಯುಲೇಶನ್ ಆಧಾರಿತ ಶೈಕ್ಷಣಿಕ ಕಾರ್ಯಾಗಾರ ಕೊಡಿಯಾಲ್‌ಬೈಲ್‌ನ ದಿ ಓಷಿಯನ್ ಪರ್ಲ್ ಹೋಟೆಲ್‌ನಲ್ಲಿ ನಡೆಯಿತು.

​‘ಸಿಮ್ಯುಲೇಶನ್ ಮೂಲಕ ಕ್ಲಿನಿಕಲ್ ಕೌಶಲ್ಯಗಳ ಕರಗತ’ ಎಂಬ ಧ್ಯೇಯವಾಕ್ಯದೊಂದಿಗೆ ಎರಡು ದಿನಗಳ ಕಾಲ ನಡೆಯುವ ಕಾರ್ಯಾಗಾರಕ್ಕೆ
ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ರೋಹನ್ ಮೋನಿಸ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ನರ್ಸಿಂಗ್ ವೃತ್ತಿ ಒಂದು ಉತ್ತಮ ವೃತ್ತಿಯಾಗಿದೆ. ನರ್ಸಿಂಗ್ ವಿಭಾಗ ದಿನದಿಂದ ದಿನಕ್ಕೆ ಪ್ರಸಿದ್ಧ ಪಡೆಯುತ್ತಿದ್ದು ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರಗಳಲ್ಲಿ ಭಾಗವಹಿಸುವ ಮೂಲಕ ತನ್ನ ಜ್ಞಾನವೃದಿಗೊಳಿಸಬೇಕು ಎಂದು ಹೇಳಿದರು.

ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಪ್ರಾಂಶುಪಾಲೆ ಡಾ. ಲಾರಿಸ್ಸಾ ಮಾರ್ತಾ ಸ್ಯಾಮ್ಸ್, ಫೇಮ್ ಅಕಾಡೆಮಿಯ ನಿರ್ದೇಶಕ ರಾಘವೇಂದ್ರ ಬಿ.ಜಿ, ಜೆನಿಪರ್ ಡಿಸೊಜಾ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಸಿಟಿ ಹಾಸ್ಪಿಟಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಕೆ. ಭಾಸ್ಕರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಿಟಿ ಕಾಲೇಜ್ ಆಫ್ ನರ್ಸಿಂಗ್ ಹಾಗೂ ಫೇಮ್ ಅಕಾಡೆಮಿ ತಂಡದ ಪದಾಧಿಕಾರಿಗಳು, ಬೋಧಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಿಟಿ ಕಾಲೇಜ್ ಆಫ್ ನರ್ಸಿಂಗ್ ಪ್ರಾಂಶುಪಾಲೆ ಡಾ. ರೆನಿಲ್ಡಾಯ ಶಾಂತಿ ಲೋಬೋ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಉಪನ್ಯಾಸಕ ಸುದರ್ಶನ್ ವಂದಿಸಿದರು. ಉಪನ್ಯಾಸಕಿ ಸೌಮ್ಯ ವಿನೋದ್ ಕಾರ್ಯಕ್ರಮ ನಿರೂಪಿಸಿದರು‌.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...