ಉಳ್ಳಾಲ ಎಸ್‌ಡಿಪಿಐ ಸಮಾವೇಶ: ಮುಸ್ಲಿಂ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಲು ಒತ್ತಾಯ

Date:

ಉಳ್ಳಾಲ: ಕಾಂಗ್ರೆಸ್ ಸರ್ಕಾರವು ಮುಸ್ಲಿಂ ಸಮುದಾಯದ ನಾಯಕರೊಬ್ಬರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯ ಅಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಒತ್ತಾಯಿಸಿದ್ದಾರೆ.

ಅವರು ಕಲ್ಲಾಪುನಿನ ಯುನಿಟ್ ಹಾಲ್ ನಲ್ಲಿ ನಡೆಯುತ್ತಿರುವ SDPi ಕಾರ್ಯಕರ್ತರ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಬಂದ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.

ಅಲ್ಪಸಂಖ್ಯಾತ ಸಮುದಾಯದ ಬೆಂಬಲವಿಲ್ಲದೆ ಕಾಂಗ್ರೆಸ್ ಅಧಿಕಾರ ಹಿಡಿಯಲು ಸಾಧ್ಯವಿರಲಿಲ್ಲ ರಾಜ್ಯದಲ್ಲಿ ಬರೋಬ್ಬರಿ 55 ಲಕ್ಷ ಮುಸ್ಲಿಂ ಮತಗಳ ಧ್ರುವೀಕರಣದಿಂದಾಗಿ ಕಾಂಗ್ರೆಸ್ ಪಕ್ಷವು ಸುಲಭವಾಗಿ ಅಧಿಕಾರದ ಗದ್ದುಗೆ ಏರಲು ಸಾಧ್ಯವಾಯಿತು. ಮುಸ್ಲಿಂ ಸಮುದಾಯವೇ ನಿಮ್ಮ ಬಹುಮತಕ್ಕೆ ಪ್ರಮುಖ ಕಾರಣವಾಗಿರುವಾಗ, ಅದೇ ಸಮುದಾಯದ ಅರ್ಹ ನಾಯಕರೊಬ್ಬರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡುವುದು ನ್ಯಾಯಸಮ್ಮತವಾಗಿದೆ,” ಎಂದು ಅವರು ಪ್ರತಿಪಾದಿಸಿದ್ದರು.

​ಈ ಸಂದರ್ಭದಲ್ಲಿ ಎಸ್ ಡಿಪಿಐ ಮುಖಂಡರಾದ ಅನ್ವರ್ ಸದಾತ್ ಬಜತ್ತೂರು, ರಿಯಾಝ್ ಕಡಂಬು, ಝಹೀದ್ ಮಲಾರ್ ಉಪಸ್ಥಿತರಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...