ಎಸ್‌ಡಿಪಿಐ ಕಲ್ಲಡ್ಕ ಬ್ಲಾಕ್ ಪ್ರತಿನಿಧಿ ಸಭೆ: ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗ ಬಲವರ್ಧನೆಗೆ ಕರೆ

Date:

ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಘಟಿತ ವಾಗಿ ಸಜ್ಜಾಗುವಂತೆ ಶಾಹುಲ್ ಎಸ್.ಎಚ್. ಸೂಚನೆ

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಕಲ್ಲಡ್ಕ ಬ್ಲಾಕ್ ಸಮಿತಿಯ ಪ್ರತಿನಿಧಿ ಸಭೆ ಎಸ್‌ಎಸ್ ಆಡಿಟೋರಿಯಂ, ಪಾಣೆಮಂಗಳೂರುನಲ್ಲಿ ಬ್ಲಾಕ್ ಅಧ್ಯಕ್ಷರಾದ ಸತ್ತರ್ ಕಲ್ಲಡ್ಕ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಶಾಹುಲ್ ಎಸ್.ಎಚ್. ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ಮೌಲ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಘಟಿತವಾಗಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಅಗತ್ಯವನ್ನು ಒತ್ತಿಹೇಳಿದರು. ನಾಯಕರ ಮೇಲೆ ಮಹತ್ವರವಾದ ಜವಾಬ್ದಾರಿಯಿದ್ದು ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವಂತೆ ಹಾಗೂ ಬ್ಲಾಕ್ ವ್ಯಾಪ್ತಿಯಲ್ಲಿ ಪಕ್ಷದ ವಿಸ್ತರಣೆಗೆ ಮತ್ತಷ್ಟು ಒತ್ತು ನೀಡಬೇಕೂ, ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಗೆ ತಳಮಟ್ಟದಿಂದಲೇ ಸಜ್ಜಾಗಬೇಕೆಂದು ಬೂತ್ ಮಟ್ಟದಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಅವರ ಪರವಾಗಿ ಧ್ವನಿಯಾಗಬೇಕು. ಜೊತೆಗೆ ಪಕ್ಷ ಸೇರ್ಪಡೆ ಅಭಿಯಾನಗಳನ್ನು ಯಶಸ್ವಿಯಾಗಿ ಜಾರಿಗೊಳಿಸುವ ಅಗತ್ಯವಿದೆ. ಜನಪರ ಹಿತಾಸಕ್ತಿಯನ್ನು ಕೇಂದ್ರ ಬಿಂದುವಾಗಿರಿಸಿಕೊಂಡು ಸಂಘಟಿತ ಹೋರಾಟಗಳನ್ನು ರೂಪಿಸುವ ಮೂಲಕ ಜನವಿರೋಧಿ ನೀತಿಗಳಿಗೆ ಪರಿಣಾಮಕಾರಿ ಪ್ರತಿರೋಧ ನೀಡಬೇಕು ಎಂದು ಅವರು ಹೇಳಿದರು. ಇದಲ್ಲದೆ, ಎಸ್‌ಐಆರ್ (SIR) ಕುರಿತು ಸಮಗ್ರ ಮಾಹಿತಿ ಜನಸಾಮಾನ್ಯರಿಗೆ ತಲುಪಿಸುವ ಜವಾಬ್ದಾರಿಯನ್ನು ಪ್ರತಿಯೊಂದು ಕಾರ್ಯಕರ್ತರು ವಹಿಸಿಕೊಳ್ಳಬೇಕು ಈಗ ನಡೆಯುತ್ತಿರುವ ಮ್ಯಾಪಿಂಗ್ ಪ್ರಕ್ರಿಯೆಯ ಕುರಿತು ಮನೆಮನೆಗೆ ತೆರಳಿ ಸ್ಪಷ್ಟ ಮಾಹಿತಿ ನೀಡುವ ಮೂಲಕ ಯಾವುದೇ ಗೊಂದಲ ಉಂಟಾಗದಂತೆ ಜಾಗೃತಿ ಮೂಡಿಸಬೇಕೆಂದು ಕರೆ ನೀಡಿದರು.

ಸಭೆಯಲ್ಲಿ ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ಬ್ಲಾಕ್ ಸಮಿತಿ ಕೈಗೊಂಡ ಜನಪರ ಹೋರಾಟಗಳು, ಸಂಘಟನಾ ಚಟುವಟಿಕೆಗಳು ಹಾಗೂ ವಿವಿಧ ಕಾರ್ಯಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ಜೊತೆಗೆ ಮುಂದಿನ ಕಾರ್ಯಕ್ರಮಗಳ ರೂಪುರೇಷೆ, ಪಕ್ಷದ ಬಲವರ್ಧನೆ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕಾಗಿ ಮುಂದಿನ ಕಾರ್ಯತಂತ್ರಗಳನ್ನು ರೂಪಿಸಲಾಯಿತು. ಸಭೆಯಲ್ಲಿ ಬ್ಲಾಕ್ ಹಾಗೂ ಗ್ರಾಮ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿ ತಮ್ಮ ಅಭಿಪ್ರಾಯಗಳು, ಸಲಹೆಗಳು ಹಾಗೂ ಮುಂದಿನ ಕಾರ್ಯಯೋಜನೆಗಳನ್ನು ಹಂಚಿಕೊಂಡರು.

ಸಭೆಯಲ್ಲಿ ಮಧ್ಯಂತರ ವರಧಿಯನ್ನು ಬ್ಲಾಕ್ ಸಮಿತಿ ಕಾರ್ಯದರ್ಶಿಗಳಾದ ಅನ್ವರ್ ಆಲಡ್ಕ ವಾಚಿಸಿದರು, ಮುಖ್ಯ ಅಥಿತಿಗಳಾಗಿ ಬಂಟ್ವಳ ಕ್ಷೇತ್ರ ಸಮಿತಿ ಕಾರ್ಯದರ್ಶಿಗಳಾದ ಅಕ್ಬರ್ ಅಲೀ, ಕೋಶಾಧಿಕಾರಿಗಳಾದ ಯಾಸೀರ್ ಕಲ್ಲಡ್ಕ, ಸಮಿತಿ ಸದಸ್ಯರಾದ ಬಶೀರ್ ಬೊಳ್ಳಾಯಿ ಆಗಮಿಸಿದ್ದರು.

ವೇದಿಕೆಯಲ್ಲಿ ಬ್ಲಾಕ್ ಸಮಿತಿ ಉಪಾಧ್ಯಕ್ಷರಾದ ಕಾದರ್ ಪಿ.ಜೆ, ಬ್ಲಾಕ್ ಸಮಿತಿ ಕೋಶಾಧಿಕಾರಿಗಳಾದ ಇಕ್ಬಾಲ್ ಕೆ.ಸಿ ರೋಡ್ ಉಪಸ್ಥಿತರಿದ್ದರು. ಬ್ಲಾಕ್ ಜೊತೆ ಕಾರ್ಯದರ್ಶಿಗಳಾದ ಇಬ್ರಾಹಿಂ ಸಮದ್ ಸ್ವಾಗತಿಸಿ, ಮನ್ಸೂರ್ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...