ಮಂಗಳೂರು ವಿವಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Date:

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಜೀವವಿಜ್ಞಾನ ವಿಭಾಗದ ಪರಿಸರ ವಿಜ್ಞಾನ ಕಾರ್ಯಕ್ರಮ ಮತ್ತು ‘ಬಯೋನೆಕ್ಸಸ್’ ವತಿಯಿಂದ, ಲೋಬೋ ಫೌಂಡೇಶನ್ ಸಹಭಾಗಿತ್ವದೊಂದಿಗೆ 2026ರ ವಿಶ್ವ ಪರಿಸರ ದಿನಾಚರಣೆಯು ಡಾ.ಯು.ಆರ್. ರಾವ್ ಸಭಾಂಗಣದಲ್ಲಿ ನಡೆಯಿತು.ಮಂಗಳೂರಿನ ಮೀನುಗಾರಿಕಾ ಕಾಲೇಜಿನ ವಿಶ್ರಾಂತ ಡೀನ್ ಮತ್ತು ವಿಸ್ತರಣಾ ನಿರ್ದೇಶಕ ಡಾ. ಎಸ್.ಎಂ. ಶಿವಪ್ರಕಾಶ್ ಅವರು ಕಾರ್ಯಕ್ರಮ ಉದ್ಘಾಟಿಸಿ ಜೀವವೈವಿಧ್ಯತೆ ಮತ್ತು ಸುಸ್ಥಿರ ಬದುಕಿನ ಮಹತ್ವವನ್ನು ಒತ್ತಿ ಹೇಳಿದರು.

ಮಾನವಕುಲದ ಉಗಮಕ್ಕಿಂತ ಮುಂಚೆಯೇ ಭೂಮಿಯು ಜೀವವೈವಿಧ್ಯತೆ ಮತ್ತು ಪರಿಸರ ಸಮತೋಲನದಿಂದ ಶ್ರೀಮಂತವಾಗಿತ್ತು. ಆದರೆ, ಸ್ವಾರ್ಥ ಮತ್ತು ನೈಸರ್ಗಿಕ ಸಂಪನ್ಮೂಲಗಳ ವಿಪರೀತ ಶೋಷಣೆಯಿಂದಾಗಿ ಮಾನವನ ಚಟುವಟಿಕೆಗಳು ಪರಿಸರಕ್ಕೆ ಅಪಾರ ಹಾನಿಯನ್ನುಂಟುಮಾಡಿವೆ ಎಂದು ಅವರು ವಿಷಾದಿಸಿದರು.

ಜೀವವಿಜ್ಞಾನ ವಿಭಾಗದ ಅಧ್ಯಕ್ಷರಾದ ಪ್ರೊ. ಎನ್.ಸಿ. ತಾರಾವತಿ ಅವರು ವಿಶ್ವ ಪರಿಸರ ದಿನದ ಮಹತ್ವ ಹಾಗೂ ಪರಿಸರ ಜಾಗೃತಿ ಮತ್ತು ಕ್ರಿಯೆಯ ಅಗತ್ಯತೆಯ ಬಗ್ಗೆ ಹೇಳಿದರು. ಕಾರ್ಯಕ್ರಮ ಸಂಯೋಜಕರಾದ ಡಾ. ಪ್ರಶಾಂತ ನಾಯ್ಕ ಅವರು ಕಾರ್ಯಕ್ರಮದ ಉದ್ದೇಶ ಹಾಗೂ ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಶೈಕ್ಷಣಿಕ ಸಂಸ್ಥೆಗಳ ಪಾತ್ರದ ಕುರಿತು ಸಭಿಕರಿಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಪ್ರೊ. ಚಂದ್ರ ಎಂ., ಪ್ರೊ. ರಾಜು ಕೃಷ್ಣ ಚಲನ್ನವರ್, ಡಾ. ನರಸಿಂಹಯ್ಯ ಎನ್. ಪ್ರೊ.‌ ಎಮ್.ಎಸ್. ಮುಸ್ತಾಕ್ ಮತ್ತು ಶ್ರೀಮತಿ ಯಮುನಾ ಅವರು ಉಪಸ್ಥಿತರಿದ್ದರು. ಬಯೋನೆಕ್ಸಸ್ ವಿದ್ಯಾರ್ಥಿ ಸಂಯೋಜಕಿ ಕುಮಾರಿ ದಕ್ಷ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯಕ್ರಮವನ್ನು ಕುಮಾರಿ ಅನುಷಾ ಪ್ರಭು ಅವರು ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...