ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

Date:

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಮಹಾಸಭೆಯು ಜೂನ್ 21ರಂದು ಬೆಳಗ್ಗೆ 10.30ಕ್ಕೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ನಡೆಯಲಿದೆ.

ಸಭೆಯ ಮುಖ್ಯ ಕಾರ್ಯಸೂಚಿಯಾಗಿ 2026-27ನೇ ಸಾಲಿನ ಕಂಬಳಗಳಿಗೆ ದಿನ ನಿಗದಿಪಡಿಸುವ ಬಗ್ಗೆ ಚರ್ಚೆ ನಡೆಯಲಿದೆ. ಕಂಬಳಗಳ ಆಯೋಜನೆ, ನಿಯಮ ಮತ್ತು ಸಮಯ ಪಾಲನೆ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗುತ್ತದೆ. ಜಿಲ್ಲಾ ಕಂಬಳ ಸಮಿತಿ ಅಧೀನದಲ್ಲಿ ನಡೆಯುವ ಅಧಿಕೃತ ಕಂಬಳಗಳಿಗೆ ಸರ್ಕಾರದ ಅನುದಾನ ಒದಗಿಸಲು ಸರ್ಕಾರದ ಆದೇಶದಂತೆ ರಾಜ್ಯ ಕಂಬಳ ಅಸೋಸಿಯೇಷನ್‌ಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸುವ ಕುರಿತು ಮಾಹಿತಿ ನೀಡಲಾಗುತ್ತದೆ. ತೀರ್ಪುಗಾರರು, ಕೋಣಗಳ ಓಡಿಸುವವರಿಗೆ ನಿರಂತರ ಕಾರ್ಯಾಗಾರ ನಡೆಸುವುದು ಹಾಗೂ ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಮತ್ತು ಎರಡು ಭಾವಚಿತ್ರಗಳನ್ನು ಸಲ್ಲಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ.

ನೂತನ ಪದಾಧಿಕಾರಿಗಳ ಆಯ್ಕೆಯು ಕಂಬಳ ಸಮಿತಿಯ ಸದಸ್ಯತ್ವ ಹೊಂದಿದವರಿಂದ ಮಾತ್ರ ನಡೆಯುತ್ತದೆ. ಕಂಬಳ ಸಮಿತಿ ತಾಲೂಕು, ಕಾಸರಗೋಡು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡಿರುತ್ತದೆ ಎಂದು ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ ಮುಚ್ಚೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...

ಮಂಗಳೂರಿನಲ್ಲಿ ಜೂನ್ 12ರಿಂದ ‘ಕುಡ್ಲ ಪೆಲಕಾಯಿ ಪರ್ಬ’: ಹಲಸು ಹಬ್ಬಕ್ಕೆ ಭರದ ಸಿದ್ಧತೆ

ಮಂಗಳೂರು: ಹನಿ ಜೆನಿಕ್ಸ್ ವತಿಯಿಂದ ಆಯೋಜಿಸಲ್ಪಡುವ “ಕುಡ್ಲ ಪೆಲಕಾಯಿ ಪರ್ಬ –...