ಮೇಲ್ತೆನೆಯ ದಶಮಾನೋತ್ಸವ ಕಾರ್ಯಕ್ರಮದ ಲೋಗೋ ಅನಾವರಣ

Date:

ದೇರಳಕಟ್ಟೆ, ಆ.31: ಬ್ಯಾರಿ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಯ ಬೆಳವಣಿಗೆಯ ನಿಟ್ಟಿನಲ್ಲಿ ಉಳ್ಳಾಲ ತಾಲೂಕು ಮಟ್ಟದಲ್ಲಿ ಕಳೆದ 10 ವರ್ಷದಿಂದ ಕಾರ್ಯಾಚರಿಸುತ್ತಿರುವ ಬ್ಯಾರಿ ಎಲ್ತ್‌ಕಾರ್ ಪಿನೆ ಕಲಾವಿದಮಾರೊ ಕೂಟ (ಮೇಲ್ತೆನೆ)ದ ದಶಮಾನೋತ್ಸವ ಕಾರ್ಯಕ್ರಮದ ಲೋಗೋವನ್ನು ರವಿವಾರ ಬಿಡುಗಡೆಗೊಳಿಸಲಾಯಿತು.
ದೇರಳಕಟ್ಟೆಯ ದುಬೈ ಪ್ಲಾಝಾದಲ್ಲಿರುವ ದಶಮಾನೋತ್ಸವದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೇಲ್ತೆನೆಯ ಗೌರವಾಧ್ಯಕ್ಷ ಆಲಿಕುಂಞಿ ಪಾರೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಮೇಲ್ತೆನೆಯ ಅಧ್ಯಕ್ಷ ವಿ. ಇಬ್ರಾಹೀಂ ನಡುಪದವು ಅಧ್ಯಕ್ಷತೆ ವಹಿಸಿದರು. ಲೋಗೋ ವಿನ್ಯಾಸಗೊಳಿಸಿದ ಮೇಲ್ತೆನೆಯ ಜೊತೆ ಕಾರ್ಯದರ್ಶಿ ಸಿದ್ದೀಕ್ ಎಸ್. ರಾಝ್ ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಮೇಲ್ತೆನೆಯ ಕೋಶಾಧಿಕಾರಿ ಮನ್ಸೂರ್ ಅಹ್ಮದ್ ಸಾಮಣಿಗೆ, ಉಪಾಧ್ಯಕ್ಷ ಅಶ್ರಫ್ ಡಿ.ಎ., ಸದಸ್ಯರಾದ ಟಿ. ಇಸ್ಮಾಯಿಲ್ ಮಾಸ್ಟರ್, ಮುಹಮ್ಮದ್ ಬಾಷಾ ನಾಟೆಕಲ್, ಬಶೀರ್ ಅಹ್ಮದ್ ಕಿನ್ಯ, ಅಬ್ದುಲ್ ಬಶೀರ್ ಕಲ್ಕಟ್ಟ, ರಫೀಕ್ (ಇಬ್ರಾಹೀಂ) ಮುದುಂಗಾರುಕಟ್ಟೆ, ಶರೀಫ್ ಪಟ್ಟೋರಿ ಉಪಸ್ಥಿತರಿದ್ದರು. ಮೇಲ್ತೆನೆಯ ಪ್ರಧಾನ ಕಾರ್ಯದರ್ಶಿ ಹಂಝ ಮಲಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...