ನಾಳೆ (ಜೂನ್ 24) ಮಂಗಳೂರು ವಿಮಾನ ನಿಲ್ದಾಣದಲ್ಲಿ ಉಬರ್ ಸೇವೆ ಬಂದ್

Date:

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುಂಬಾ ದಿನಗಳಿಂದ ಚಾಲಕರಿಗೆ ಅನ್ಯಾಯ ಮಾಡುತ್ತಿರುವ ಉಬರ್ ಕಂಪನಿಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಆನ್‌ಲೈನ್ ಟ್ಯಾಕ್ಸಿ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಚಾಲಕರ ಹಲವು ಬೇಡಿಕೆಗಳು, ಸಮಸ್ಯೆಗಳು ಹಾಗೂ ನ್ಯಾಯಯುತ ಹಕ್ಕುಗಳ ಕುರಿತು ಅನೇಕ ಬಾರಿ ಮನವಿ ಸಲ್ಲಿಸಿದರೂ, ಉಬರ್ ಕಂಪನಿಯಿಂದ ಯಾವುದೇ ಸಮರ್ಪಕ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಉಬರ್ ಸೇವೆಯನ್ನು ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ. ಚಾಲಕರ ಆದಾಯದ ಕುಸಿತ, ಹೆಚ್ಚುತ್ತಿರುವ ಕಮಿಷನ್ ಕಡಿತ, ಅನ್ಯಾಯಕರ ನಿಯಮಗಳು ಹಾಗೂ ಚಾಲಕರ ಹಿತಾಸಕ್ತಿಗೆ ವಿರುದ್ಧವಾಗಿರುವ ಹಲವು ನೀತಿಗಳ ಬಗ್ಗೆ ಉಬರ್ ಆಡಳಿತವು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಚಾಲಕರು ಆಗ್ರಹಿಸಿದ್ದಾರೆ.

ಮಂಗಳೂರು ಆನ್‌ಲೈನ್ ಟ್ಯಾಕ್ಸಿ ಯೂನಿಯನ್ ಒಕ್ಕೂಟದ ವತಿಯಿಂದ ಪ್ರಕಟಿಸಲಾಗಿರುವ ಈ ಹೋರಾಟವು ನಾಳೆ ಬೆಳಿಗ್ಗೆಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಬರ್ ಸೇವೆ ಸ್ಥಗಿತಗೊಳಿಸುವ ಮೂಲಕ ಆರಂಭವಾಗಲಿದೆ. ಈ ಹೋರಾಟಕ್ಕೆ ಮಂಗಳೂರಿನ ಎಲ್ಲಾ ಆನ್‌ಲೈನ್ ಟ್ಯಾಕ್ಸಿ ಯೂನಿಯನ್‌ಗಳ ಸಹಮತ ಹಾಗೂ ಬೆಂಬಲವಿದೆ. ಆದ್ದರಿಂದ ಎಲ್ಲಾ ಚಾಲಕರು ಒಗ್ಗಟ್ಟಿನಿಂದ ಯೂನಿಯನ್ ಜೊತೆ ಕೈಜೋಡಿಸಿ ಹೋರಾಟವನ್ನು ಯಶಸ್ವಿಗೊಳಿಸುವಂತೆ ವಿನಂತಿಸಲಾಗಿದೆ.

ನಮ್ಮ ನ್ಯಾಯಯುತ ಬೇಡಿಕೆಗಳನ್ನು ಉಬರ್ ಕಂಪನಿ ಈಡೇರಿಸುವವರೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಉಬರ್ ಸೇವೆ ಬಂದ್ ಮುಂದುವರಿಯಲಿದೆ. ಚಾಲಕರ ಏಕತೆ – ನಮ್ಮ ಶಕ್ತಿಯಾಗಿದೆ. ನ್ಯಾಯ ಸಿಗುವವರೆಗೆ ಹೋರಾಟ ನಿರಂತರವಾಗಿರಲಿದೆ ಎಂದು ಮಂಗಳೂರು ಆನ್‌ಲೈನ್ ಟ್ಯಾಕ್ಸಿ ಯೂನಿಯನ್ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಜೂನ್ 25ರಂದು ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ

ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು...

ರೋಟರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ರೋಟರಿ ಪಿ.ಯು.ಕಾಲೇಜಿನ ವಿದ್ಯಾರ್ಥಿ ಸಂಘವು ಮಂಗಳವಾರ ಉದ್ಘಾಟನೆಗೊಂಡಿತು. ಖ್ಯಾತ...

ಮೂಡಬಿದಿರೆ: ಮನೆಕೆಲಸಕ್ಕಿದ್ದ ಜಾರ್ಖಂಡ್ ಮೂಲದ ಮಹಿಳೆ ನಾಪತ್ತೆ

ಮೂಡಬಿದಿರೆ: ಜಾರ್ಖಂಡ್ ಮೂಲದ ಮಹಿಳೆಯೊಬ್ಬರು ದರೆಗುಡ್ಡೆ ಸಮೀಪದ ಕಕ್ಕೆಕಾಡು ಬಳಿಯ ಮನೆಯಿಂದ...

ಮಂಗಳೂರು ಖಾಝಿ ಶೈಖುನಾ ತ್ವಾಖಾ ಉಸ್ತಾದ್ ನಿಧನಕ್ಕೆ ಸಂತಾಪ

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಖಾಜಿಯಾಗಿದ್ದ ಗೌರವಾನ್ವಿತ ಧಾರ್ಮಿಕ ಮುಖಂಡರಾದ...