ಎನ್‌ಆರ್‌ಐ ಸಚಿವಾಲಯ ಜಾರಿಗೆ ಆಗ್ರಹಿಸಿ ಜೂನ್ 26ರಂದು ಜಾಗತಿಕ ಟ್ವಿಟರ್ (X) ಅಭಿಯಾನ

Date:

ಬೆಂಗಳೂರು, ಜೂನ್ 25: ಕರ್ನಾಟಕ ಅನಿವಾಸಿ ಒಕ್ಕೂಟದ ವತಿಯಿಂದ ಎನ್‌ಆರ್‌ಐ ಸಚಿವಾಲಯವನ್ನು ತಕ್ಷಣ ಜಾರಿಗೆ ತರಬೇಕು ಹಾಗೂ ಡಾ. ಆರತಿ ಕೃಷ್ಣ ಅವರನ್ನು ಎನ್‌ಆರ್‌ಐ ಸಚಿವರಾಗಿ ನೇಮಕ ಮಾಡಬೇಕೆಂಬ ಆಗ್ರಹದೊಂದಿಗೆ ಜೂನ್ 26, ಶುಕ್ರವಾರ ಜಾಗತಿಕಮಟ್ಟದಲ್ಲಿ ಟ್ವಿಟರ್ (X) ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ವಿಶ್ವದಾದ್ಯಂತ ನೆಲೆಸಿರುವ ಲಕ್ಷಾಂತರ ಅನಿವಾಸಿ ಕನ್ನಡಿಗರು ಈ ಅಭಿಯಾನದಲ್ಲಿ ಭಾಗವಹಿಸಿ ತಮ್ಮ ಧ್ವನಿಯನ್ನು ಸರ್ಕಾರದ ಗಮನಕ್ಕೆ ತಲುಪಿಸುವಂತೆ ಒಕ್ಕೂಟ ಮನವಿ ಮಾಡಿದೆ.

ಈ ಅಭಿಯಾನದ ಮೂಲಕ ರಾಜ್ಯ ಸರ್ಕಾರವು ಅನಿವಾಸಿ ಕನ್ನಡಿಗರ ಸಮಸ್ಯೆಗಳು, ಹಕ್ಕುಗಳು ಹಾಗೂ ಕಲ್ಯಾಣಕ್ಕೆ ವಿಶೇಷ ಆದ್ಯತೆ ನೀಡಿ ಪ್ರತ್ಯೇಕ ಎನ್‌ಆರ್‌ಐ ಸಚಿವಾಲಯವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಲಾಗಿದೆ. ಜೊತೆಗೆ, ಎನ್‌ಆರ್‌ಐ ಸಮುದಾಯದ ಪರವಾಗಿ ಕಾರ್ಯನಿರ್ವಹಿಸಿರುವ ಡಾ. ಆರತಿ ಕೃಷ್ಣ ಅವರಿಗೆ ಎನ್‌ಆರ್‌ಐ ಸಚಿವರ ಜವಾಬ್ದಾರಿಯನ್ನು ನೀಡಬೇಕೆಂದು ಆಗ್ರಹಿಸಲಾಗಿದೆ.

ಜೂನ್ 26ರಂದು ಸಂಜೆ 6 ಗಂಟೆಗೆ (ಭಾರತೀಯ ಕಾಲಮಾನ) ನಡೆಯಲಿರುವ ಈ ಅಭಿಯಾನದಲ್ಲಿ ವಿಶ್ವದಾದ್ಯಂತ ಇರುವ ಅನಿವಾಸಿ ಕನ್ನಡಿಗರು ಹಾಗೂ ಕನ್ನಡಾಭಿಮಾನಿಗಳು ಟ್ವಿಟರ್ (X) ಮೂಲಕ ತಮ್ಮ ಬೆಂಬಲವನ್ನು ವ್ಯಕ್ತಪಡಿಸುವಂತೆ ಕರ್ನಾಟಕ ಅನಿವಾಸಿ ಒಕ್ಕೂಟ ಕೋರಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಚಲಿತ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಲೋಬೋ ಫೌಂಡೇಶನ್ (ರಿ) ಜಂಟಿ ಆಶ್ರಯದಲ್ಲಿ “ಬಾಲಿಕಾ ಜಾಗೃತಿ ಅಭಿಯಾನ”

ಮಂಗಳೂರು: ಪ್ರಚಲಿತ ಚಾರಿಟೇಬಲ್ ಟ್ರಸ್ಟ್ (ರಿ) ಮತ್ತು ಲೋಬೋ ಫೌಂಡೇಶನ್ (ರಿ)...

ಡಾ. ಜಿ.ಪರಮೇಶ್ವರ್ ಅವರು ತಮ್ಮ ವ್ಯಕ್ತಿತ್ವದಿಂದ ಶ್ರೀಮಂತರು: ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ

ಬೆಂಗಳೂರು: ರಾಜಕೀಯವಾಗಿ ತಮ್ಮ ವೈಯುಕ್ತಿಕ ಸಾಮರ್ಥ್ಯದ ಜೊತೆಗೆ ಧಾರ್ಮಿಕ ನಂಬಿಕೆಯ ಶಕ್ತಿಯ...

“ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್? 19 ಸಾವಿರ ಮಹಿಳೆಯರಿಗೆ ಒಂದೇ ಬ್ಯಾಂಕ್ ಖಾತೆ, ಸಿಎಜಿ ವರದಿಯಲ್ಲಿ ಬೆಚ್ಚಿಬೀಳಿಸುವ ಅಂಶಗಳು!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಲ್ಲಿ ಗಂಭೀರ ಅಕ್ರಮಗಳು...

ಮಂಗಳೂರು ಆನ್‌ಲೈನ್ ಟ್ಯಾಕ್ಸಿ ಯೂನಿಯನ್ ಒಕ್ಕೂಟದ ಹೋರಾಟಕ್ಕೆ ಎಸ್.ಡಿ.ಟಿ.ಯು ಸಂಪೂರ್ಣ ಬೆಂಬಲ

ಮಂಗಳೂರು: ಉಬರ್ ಕಂಪೆನಿಯ ಅನ್ಯಾಯದ ನೀತಿ ಹಾಗೂ ಚಾಲಕರ ಜೀವನೋಪಾಯಕ್ಕೆ ಧಕ್ಕೆ...