
ಮಂಗಳೂರು: ಕರ್ನಾಟಕ ಜಾನಪದ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್ ಅವರು ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ‘ರಾಷ್ಟ್ರೀಯ ಗೌರವ ಐಕಾನ್ ಅವಾರ್ಡ್ ಫಾರ್ ಸೋಶಿಯಲ್ ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಗ್ಲೋಬಲ್ ಅಚೀವರ್ಸ್ ಕೌನ್ಸಿಲ್ ವತಿಯಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಆಗಸ್ಟ್ 23ರಂದು ಮಧ್ಯಾಹ್ನ 2 ಗಂಟೆಗೆ ನವದೆಹಲಿಯ ಹೋಟೆಲ್ ಸಮ್ರಾಟ್ನಲ್ಲಿ ನಡೆಯಲಿದೆ.
ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಅವರ ಸಮರ್ಪಣೆ, ನಿರಂತರ ಪರಿಶ್ರಮ ಹಾಗೂ ಸಮಾಜಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಗ್ಲೋಬಲ್ ಅಚೀವರ್ಸ್ ಕೌನ್ಸಿಲ್ ತಿಳಿಸಿದೆ.
ಈ ಗೌರವಕ್ಕೆ ಆಯ್ಕೆಯಾಗಿರುವ ಶ್ರೀ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್ ಅವರಿಗೆ ಗಣ್ಯರು, ಸ್ನೇಹಿತರು ಹಾಗೂ ಹಿತೈಷಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದು, ಅವರ ಸಾಮಾಜಿಕ ಸೇವಾ ಕಾರ್ಯಗಳು ಮತ್ತಷ್ಟು ಯಶಸ್ವಿಯಾಗಿ ಮುಂದುವರಿಯಲಿ ಎಂದು ಶುಭ ಹಾರೈಸಿದ್ದಾರೆ…..


