SDTU ಮಂಗಳೂರು ನಗರ ಜಿಲ್ಲಾ ಸಮಿತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Date:

ಮಂಗಳೂರು, ಆಗಸ್ಟ್ 15: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ಮಂಗಳೂರು ನಗರ ಜಿಲ್ಲಾ ಸಮಿತಿಯ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರೆವೆರೆಸಿದ ಬಳಿಕ ಸಭಾ ಕಾರ್ಯಕ್ರಮದಲಗಲ್ಲಿ SDTU ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಹಾಗೂ ಮಂಗಳೂರು ನಗರ ಜಿಲ್ಲಾ ಅಧ್ಯಕ್ಷ ರಹಿಮಾನ್ ಬೋಳಿಯಾರ್ ಅವರು ಸಂದೇಶ ಭಾಷಣ ಮಾಡಿದರು. ದೇಶದ ಸ್ವಾತಂತ್ರ್ಯವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಗೌರವ ಮತ್ತು ನ್ಯಾಯವನ್ನು ಖಾತ್ರಿಪಡಿಸುವಂತಿರಬೇಕು. ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಶ್ರಮ ಮಹತ್ವದ್ದಾಗಿದ್ದು, ಕಾರ್ಮಿಕರ ಹಕ್ಕುಗಳ ರಕ್ಷಣೆ ಹಾಗೂ ಗೌರವಯುತ ಬದುಕಿಗಾಗಿ ನಿರಂತರವಾಗಿ ಧ್ವನಿ ಎತ್ತಬೇಕಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಇರ್ಫಾನ್ ಕಾನ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಬೆಂಗ್ರೆ, ಮಂಗಳೂರು ನಗರ ತಾಲೂಕು ಸಮಿತಿ ಅಧ್ಯಕ್ಷ ಇಕ್ಬಾಲ್ ಬಿಪಿ, ಕಾರ್ಯದರ್ಶಿ ಅನ್ಸಾರ್ ಕುದ್ರೋಳಿ, ಉಪಾಧ್ಯಕ್ಷ ಮುಸ್ತಫಾ ಪರ್ಲಿಯಾ, ಕೋಶಾಧಿಕಾರಿ ಶರೀಫ್ ಕುತ್ತಾರ್, ಬಂದರು ಟೆಂಪೊ ಚಾಲಕರ ಮಾಲಕರ ಸಂಘದ ಸದಸ್ಯ ರಮೀಝ್, ಮಂಗಳೂರಿನ ಉದ್ಯಮಿ ಹಮೀದ್ ಶಾ ಹಾಗೂ ಮಂಗಳೂರು ನಗರ ತಾಲೂಕು ಅಟೋ ಯೂನಿಯನ್ ಸಮಿತಿ ಸದಸ್ಯ ಹಕೀಂ ಕಾನ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮವು ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಹಾಗೂ ಕಾರ್ಮಿಕರ ಹಕ್ಕುಗಳ ಬದ್ಧತೆಯನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪದೊಂದಿಗೆ ನಡೆಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...